ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದು ಪ್ರಧಾನಿ ಮೋದಿ ಆಡಳಿತದ ವೈಫಲತ್ಯಗಳೆಂದು ವಿಪಕ್ಷಗಳು ಕಿಡಿಕಾರುತ್ತಿವೆ. ಇದಕ್ಕೆ ಪ್ರತ್ಯುತ್ತರವಾಗಿ ಬಿಜೆಪಿ ಪ್ರಧಾನಿ ಮೋದಿ ನಡೆಸಿದ ಸಭೆಗಳ ಬಗ್ಗೆ ಮಾಹಿತಿ ನೀಡಿದೆ.
ಕೊರೋನಾ ಸೋಂಕು ಹೆಚ್ಚಾಗುವ ಭೀತಿಯಲ್ಲಿದ್ದ ಪ್ರಧಾನಿ ಮೋದಿ ಕಳೆದ ಸೆಪ್ಟೆಂಬರ್ ನಿಂದ 2021ರ ಏಪ್ರಿಲ್ 23ರವರೆಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ 6 ಸಭೆಗಳನ್ನು ನಡೆಸಿದ್ದಾರೆ. ಸಭೆಯಲ್ಲಿ ಎಲ್ಲಾ ಮುಖ್ಯಮಂತ್ರಿಗಳಿಗೆ ಎರಡನೇ ಅಲೆಯ ಬಗ್ಗೆ ಎಚ್ಚರಿಕೆ ನೀಡಲಾಗಿತ್ತು ಎಂದು ಬಿಜೆಪಿ ತಿಳಿಸಿದೆ.
ಮಾ. 17ರಂದು ಪ್ರಧಾನಿ ಮೋದಿ ನಡೆಸಿದ ಸಭೆಯಲ್ಲೂ ಕೋವಿಡ್ ಹೊಸ ಅಲೆಯ ಬಗ್ಗೆ ತಿಳಿಸಿದ್ದು, ಆಯಾ ರಾಜ್ಯಗಳು ಸೋಂಕು ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.
ಕೊರೋನಾ ನಿಯಂತ್ರಣದ ಬಗ್ಗೆ ಸರ್ಕಾರ ಕೈಗೊಂಡ ನಿರ್ಣಯದ ಬಗ್ಗೆ ನಮಗೆ ವಿಶ್ವಾಸವಿದೆ. ಎಲ್ಲಾ ಸರ್ಕಾರಗಳು ಪೂರ್ವಭಾವಿಯಾಗಿ ಸಿದ್ಧತೆ ಮಾಡಿಕೊಳ್ಳುವುದು ಉತ್ತಮ ಎಂದು ತಿಳಿಸಿದ್ದಾರೆ ಎಂದು ಬಿಜೆಪಿ ತಿಳಿಸಿದೆ.