ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು ಮತ್ತು ಅವರನ್ನು ಉತ್ಸಾಹದಿಂದ ಸ್ವಾಗತಿಸಿದರು.
ಪ್ರಧಾನಿ ಮೋದಿ ಜನರತ್ತ ಕೈ ಬೀಸಿದರು, ಅವರಲ್ಲಿ ಹಲವರು ತ್ರಿವರ್ಣ ಧ್ವಜವನ್ನು ಹಿಡಿದಿದ್ದರು. ಘೋಷಣೆಗಳನ್ನು ಕೂಗಿದರು. ದಾರಿಯುದ್ದಕ್ಕೂ ಜನರು ಪ್ರಧಾನಿ ಮೋದಿಯವರನ್ನು ನೋಡಲು ಕಾತುರದಿಂದ ಕಾದುಕುಳಿತ್ತಿದ್ದರು.
ಇದಕ್ಕೂ ಮೊದಲು, ಇಂದು ಸಂಜೆ ಪಾಟ್ನಾದ ಜಯಪ್ರಕಾಶ್ ನಾರಾಯಣ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.
ಪ್ರಧಾನಿ ಮೋದಿ ಅವರೊಂದಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಇದ್ದರು.