ಹೊಸದಿಗಂತ ಡಿಜಿಟಲ್ ಡೆಸ್ಕ್ :
ಸಂಸತ್ತಿನಲ್ಲಿ ಸರ್ಕಾರದ ಕಾರ್ಯತಂತ್ರದ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವರೊಂದಿಗೆ ಗುರುವಾರ ಸಭೆ ನಡೆಸಿದರು.
ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕ್ರೀಡಾ ಸಚಿವ ಅನುರಾಗ್ ಠಾಕೂರ್, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಕಾನೂನು ಸಚಿವ ಕಿರಣ್ ರಿಜಿಜು ಸೇರಿದಂತೆ ಸಚಿವರು ಉಪಸ್ಥಿತರಿದ್ದರು.
ವಿರೋಧ ಪಕ್ಷಗಳು ಎತ್ತಿರುವ ಪ್ರಶ್ನೆಗಳ ಕುರಿತು ಚರ್ಚಿಸಲಾಗಿದೆ. ಮತ್ತೊಂದೆಡೆ ಕಾಂಗ್ರೆಸ್ ಪಕ್ಷು ಕೆಲವು ವಿರೋಧ ಪಕ್ಷಗಳೊಂದಿಗೆ ಸಭೆ ನಡೆಸಿತು. ಅದಾನಿ ಗ್ರೂಪ್ ಅವ್ಯವಹಾರ, ದೇಶದಲ್ಲಿ ಬೆಲೆ ಏರಿಕೆ, ಹಣದುಬ್ಬರ, ಚೀನಾದಿಂದ ಎದುರಾಗುತ್ತಿರು ಬೆದರಿಕೆ ವಿಷಯಗಳ ಕುರಿತು ಚರ್ಚೆಗೆ ಕೆಲವು ವಿರೋಧ ಪಕ್ಷದ ಸಂಸದರು ಒತ್ತಾಯಿಸಿದ್ದಾರೆ.
ವಿರೋಧ ಪಕ್ಷಗಳ ಸಭೆಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಎಲ್‌ಐಸಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕ್‌ಗಳಂತಹ ವಿಷಯಗಳ ಕುರಿತು ಮುಂದೂಡಿಕೆ ನಿರ್ಣಯದ ಸೂಚನೆಯನ್ನು ನೀಡಿದ್ದೇವೆ ಎಂದು ಹೇಳಿದ್ದಾರೆ.