ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೂನ್ 27 ರಂದು ಪ್ರಧಾನಿ ಮೋದಿ ಮಧ್ಯಪ್ರದೇಶಕ್ಕೆ ಬೇಟಿ ನೀಡುತ್ತಿದ್ದಾರೆ.
ನಾಳೆ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಲ್ಲಿ ಐದು ʻವಂದೇ ಭಾರತ್ ಎಕ್ಸ್‌ಪ್ರೆಸ್ʼ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿರುವ ಪ್ರಧಾನಿ, ರಾಷ್ಟ್ರೀಯ ʻಸಿಕಲ್ ಸೆಲ್ ರಕ್ತಹೀನತೆ ನಿರ್ಮೂಲನೆ ಅಭಿಯಾನʼಕ್ಕೆ ಚಾಲನೆ, ಆಯುಷ್ಮಾನ್ ಕಾರ್ಡ್ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳತ್ತಿದ್ದಾರೆ.
ಬೆಳಿಗ್ಗೆ 10:30ಕ್ಕೆ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ ಐದು `ವಂದೇ ಭಾರತ್’ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.
ಬಳಿಕ ಮಧ್ಯಾಹ್ನ 3ಗಂಟೆಗೆ ಶಹದೋಲ್‌ನಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ, ಅಲ್ಲಿ ರಾಣಿ ದುರ್ಗಾವತಿ ಅವರಿಗೆ ಗೌರವ ನಮನ ಸಲ್ಲಿಸಲಿದ್ದಾರೆ.
ಆ ಬಳಿಕ ʻಸಿಕಲ್ ಸೆಲ್ ರಕ್ತಹೀನತೆ ನಿರ್ಮೂಲನೆ ಅಭಿಯಾನʼಕ್ಕೆ ಚಾಲನೆ ನೀಡಲಿರುವ ಪ್ರಧಾನಿ, ʻಆಯುಷ್ಮಾನ್ ಕಾರ್ಡ್ʼಗಳ ವಿತರಣೆಗೂ ಚಾಲನೆ ನೀಡಲಿದ್ದಾರೆ. ಶಹದೋಲ್ ಜಿಲ್ಲೆಯ ಪಕಾರಿಯಾ ಗ್ರಾಮಕ್ಕೂ ಭೇಟಿ ನೀಡಲಿದ್ದಾರೆ.
ಐದು ʻವಂದೇ ಭಾರತ್ ಎಕ್ಸ್‌ಪ್ರೆಸ್ʼ ರೈಲುಗಳಿಗೆ ಹಸಿರು ನಿಶಾನೆ
ʻರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್‌ಪ್ರೆಸ್ʼ; ʻಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್ʼ; ʻಮಡಗಾಂವ್ (ಗೋವಾ) – ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ʼ; ʻಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ʼ; ಮತ್ತು ʻಹಟಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್ʼ.