ನಾಳೆ ನಾಗ್ಪುರದಲ್ಲಿ ವಂದೇ ಭಾರತ್ ರೈಲು ಸೇವೆ, ಏಮ್ಸ್ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಪ್ರಧಾನಿ ಮೋದಿ ಅವರು ನಾಳೆ ಮಹಾರಾಷ್ಟ್ರದ ನಾಗ್ಪುರ ಭೇಟಿ ವೇಳೆ ₹ 75,000 ಕೋಟಿ ಮೊತ್ತದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಹೇಳಿಕೆಯಲ್ಲಿ ತಿಳಿಸಿದೆ.
ಪ್ರಧಾನಮಂತ್ರಿಯವರು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ (ನಾಗ್‌ಪುರ ಮತ್ತು ಬಿಲಾಸ್‌ಪುರದ ನಡುವೆ) ಚಾಲನೆ ನೀಡಲಿದ್ದಾರೆ. ಮತ್ತು ನಾಗ್ಪುರ ಮೆಟ್ರೋದ ಹಂತ-1 ಅನ್ನು ಪ್ರಾರಂಭಿಸುತ್ತಾರೆ.
ನಾಗ್ಪುರ ಮೆಟ್ರೋ ಹಂತ-II ನ ಶಿಲಾನ್ಯಾಸವನ್ನು ಪ್ರಧಾನಿ ಮೋದಿಯವರು ನೆರವೇರಿಸಲಿದ್ದಾರೆ. ನಾಗ್ಪುರ ಮತ್ತು ಶಿರಡಿಯನ್ನು ಸಂಪರ್ಕಿಸುವ ‘ಸಮೃದ್ಧಿ ಮಹಾಮಾರ್ಗ್’ ಮೊದಲ ಹಂತವನ್ನು ಉದ್ಘಾಟಿಸಲಿದ್ದಾರೆ ಮತ್ತು AIIMS (ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ಸ್ಥಳೀಯ ಆಡಳಿತವು ಹಂಚಿಕೊಂಡ ತಾತ್ಕಾಲಿಕ ಪ್ರವಾಸ ಕಾರ್ಯಕ್ರಮದ ಪ್ರಕಾರ, ಪ್ರಧಾನ ಮಂತ್ರಿಯವರು ನವದೆಹಲಿಯಿಂದ ಬೆಳಿಗ್ಗೆ 9:40 ಕ್ಕೆ ನಾಗ್ಪುರದ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ ಮತ್ತು ನಗರ ರೈಲು ನಿಲ್ದಾಣಕ್ಕೆ ತೆರಳುತ್ತಾರೆ, ಅಲ್ಲಿ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ಗೆ ಚಾಲನೆ ನೀಡಲಿದ್ದಾರೆ. ಬಳಿಕ ಗೋವಾಕ್ಕೆ ತೆರಳುವ ಮುನ್ನ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಗೋವಾಕ್ಕೆ ತೆರಳುವ ಮುನ್ನ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ನಗರಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ವಿವಿಧ ಘಟಕಗಳ ಸುಮಾರು 4,000 ಪೊಲೀಸ್ ಸಿಬ್ಬಂದಿ ನಾಗಪುರದಲ್ಲಿ ಭದ್ರತಾ ಕರ್ತವ್ಯದಲ್ಲಿ ಇರಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!