ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುನೈಟೆಡ್ ಕಿಂಗ್‌ಡಮ್ ಮತ್ತು ಮಾಲ್ಡೀವ್ಸ್ ಭೇಟಿಯಿಂದ ಇಂದು ಭಾರತಕ್ಕೆ ಹಿಂದಿರುಗಿದ ಪ್ರಧಾನಿ ಮೋದಿ ಅವರು ನೇರವಾಗಿ ತಮಿಳುನಾಡಿಗೆ ಬಂದಿಳಿದಿದ್ದಾರೆ.
ತಮಿಳುನಾಡಿನ ಟುಟಿಕೋರಿನ್ ನಲ್ಲಿ ಪ್ರಧಾನಿ ಮೋದಿ ಅವರು 4,800 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು.
ತಮಿಳುನಾಡಿನಲ್ಲಿ ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವ, ಲಾಜಿಸ್ಟಿಕ್ಸ್ ದಕ್ಷತೆಯನ್ನು ಸುಧಾರಿಸುವ, ಶುದ್ಧ ಇಂಧನ ಮೂಲಸೌಕರ್ಯವನ್ನು ಬಲಪಡಿಸುವ ವಿವಿಧ ವಲಯಗಳಲ್ಲಿ ಹಲವಾರು ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಿದರು.