AERO INDIA 2023 | ಏಷ್ಯಾದ ಅತಿದೊಡ್ಡ ಏರ್ ಶೋ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

14ನೇ ಆವೃತ್ತಿಯ ಏರೋ ಇಂಡಿಯಾ ಶೋಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಿದ್ದಾರೆ.
ಯಲಹಂಕ ವಾಯುನೆಲೆಯಲ್ಲಿ ಐದು ದಿನಗಳ ಕಾಲ ಏರ್ ಶೋ ನಡೆಯಲಿದ್ದು, ಪ್ರಧಾನಿ ಮೋದಿ ಉದ್ಘಾಟನೆ ನೆರವೇರಿಸಿ, ಏರೋ ಇಂಡಿಯಾ ಸ್ಮರಣಾರ್ಥ ಅಂಚೆಚೀಟಿಗಳನ್ನು ಬಿಡುಗಡೆ ಮಾಡಿದ್ದಾರೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದಾರೆ. ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ ನೀಡುತ್ತಿದ್ದಲೇ ಸಾರಂಗ್ ಹೆಲಿಕಾಪ್ಟರ್ ಹಾಗೂ ಇನ್ನಿತರ ಯುದ್ಧವಿಮಾನಗಳು ಆಗಸದಲ್ಲಿ ಪ್ರದರ್ಶನ ನೀಡಿವೆ.

ಇದು ಬರೀ ವೈಮಾನಿಕ ಪ್ರದರ್ಶನವಷ್ಟೇ ಅಲ್ಲ. 809 ಕಂಪನಿಗಳು ರಮ್ಮ ಉತ್ಪನ್ನಗಳನ್ನು ಪ್ರದರ್ಶನಕ್ಕಿಡುತ್ತಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!