ಬಿಹಾರದಲ್ಲಿ ನಳಂದ ವಿಶ್ವವಿದ್ಯಾಲಯ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದಲ್ಲಿ ನಳಂದ ವಿಶ್ವವಿದ್ಯಾಲಯ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ರಾಜ್‌ಗಿರ್‌ನ ನಳಂದಾ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್‌ನಲ್ಲಿ ಫಲಕವನ್ನು ಅನಾವರಣಗೊಳಿಸಿದರು. ನಂತರ ಪ್ರಧಾನಿಯವರು ಸಸಿ ಕೂಡ ನೆಟ್ಟರು.

ವಿದೇಶಾಂಗ ಸಚಿವ ಎಸ್ ಜೈಶಂಕರ್, ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್, ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪ ಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಮತ್ತು ಇತರ ಪ್ರತಿನಿಧಿಗಳು ನಳಂದ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್‌ನಲ್ಲಿ ಉಪಸ್ಥಿತರಿದ್ದರು.

17 ದೇಶಗಳ ರಾಯಭಾರಿಗಳೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂದು ಬೆಳಗ್ಗೆ ಪ್ರಧಾನಿ ಮೋದಿ ಅವರು ಪುರಾತನ ನಳಂದ ಮಹಾವಿಹಾರದ ಅವಶೇಷಗಳಿಗೆ ಭೇಟಿ ನೀಡಿದರು. ಸುಮಾರು 1600 ವರ್ಷಗಳ ಹಿಂದೆ ಸ್ಥಾಪಿತವಾದ ಪ್ರಾಚೀನ ನಳಂದಾ ವಿಶ್ವವಿದ್ಯಾನಿಲಯವು ವಿಶ್ವದ ಮೊದಲ ವಸತಿ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ. ಹೊಸ ವಿಶ್ವವಿದ್ಯಾನಿಲಯ ಕ್ಯಾಂಪಸ್ ಅನ್ನು ಐತಿಹಾಸಿಕ ನಳಂದ ವಿಶ್ವವಿದ್ಯಾಲಯದ ಪ್ರತಿರೂಪವಾಗಿ ರಚಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!