Friday, June 2, 2023

Latest Posts

ಬಿಜೆಪಿಯ ಹೊಸ ವಸತಿ ಸಂಕೀರ್ಣ, ಸಭಾಂಗಣವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿಯ) ಹೊಸ ವಸತಿ ಸಂಕೀರ್ಣ ಮತ್ತು ಸಭಾಂಗಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಿದರು.

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮಾರ್ಗನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯ ಮುಂಭಾಗದಲ್ಲಿ ಹೊಸ ಸಂಕೀರ್ಣವನ್ನು ನಿರ್ಮಿಸಲಾಗಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ/ಸಚಿವ ಮಟ್ಟದ ನಾಯಕರು ಬಳಸಲಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಗೃಹ ಸಚಿವ ಅಮಿತ್ ಶಾ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಪಕ್ಷದ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಸೇರಿದಂತೆ ಎಲ್ಲಾ ಕೇಂದ್ರ ಸಚಿವರು, ಬಿಜೆಪಿ ಸಂಸದರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!