ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇಯನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ.
ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಎಂದೂ ಕರೆಯಲ್ಪಡುವ 213 ಕಿಲೋಮೀಟರ್ ಉದ್ದದ ಈ ಎಕ್ಸ್‌ಪ್ರೆಸ್‌ವೇ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ಗಳನ್ನು ಸಂಪರ್ಕಿಸಲಿದ್ದು, ಈ ಮೂಲಕ ಈ ಹಿಂದೆ ಕನಿಷ್ಠ 6 ಗಂಟೆಗಳ ಕಾಲದ ಪ್ರಯಾಣ ಇನ್ಮುಂದೆ ಕೇವಲ 2.5 ಗಂಟೆಗೆ ಇಳಿಕೆಯಾಗಲಿದೆ. ಪ್ರವಾಸಿಗರಿಗೆ ಮತ್ತು ನಿತ್ಯ ಪ್ರಯಾಣಿಕರಿಗೆ ಸಹಕಾರಿಯಾಗಲಿದೆ.
ಈ ಯೋಜನೆಯಲ್ಲಿ ವಿಶೇಷವಾಗಿ ಪರಿಸರ ಮತ್ತು ಅಭಿವೃದ್ಧಿಗೆ ಹೆಚ್ಚು ಮಹತ್ವ ನೀಡಲಾಗಿದ್ದು, ಏಷ್ಯಾದಲ್ಲೇ ಅತಿ ಉದ್ದವಾದ 12 ಕಿ.ಮೀ. ಎತ್ತರದ ವನ್ಯಜೀವಿ ಕಾರಿಡಾರ್ ಅನ್ನು ನಿರ್ಮಿಸಲಾಗಿದೆ. ಇದರಿಂದ ರಸ್ತೆಗಳಿಗೆ ಕಾಡು ಪ್ರಾಣಿಗಳ ಆಗಮನಕ್ಕೆ ತಡೆ ಬೀಳಲಿದ್ದು, ಮುಕ್ತ ಸಂಚಾರಕ್ಕೆ ಅನುಕೂಲವಾಗಲಿದೆ. ಇದರ ಜೊತೆಗೆ ಈ ಹತ್ತು ಇಂಟರ್‌ಚೇಂಜ್‌ಗಳು, ಮೂರು ರೈಲ್ವೆ ಓವರ್‌ಬ್ರಿಡ್ಜ್‌ಗಳು, ನಾಲ್ಕು ಪ್ರಮುಖ ಸೇತುವೆಗಳುನಿರ್ಮಾಣ ಮಾಡಲಾಗಿದ್ದು, ಸುಧಾರಿತ ಸಂಚಾರ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ.
ಈ ಆರು ಪಥಗಳ ಹೆದ್ದಾರಿಯಿಂದಾಗಿ ಪ್ರಾದೇಶಿಕ ವ್ಯಾಪಾರ ಮತ್ತು ಪ್ರವಾಸೋದ್ಯಮಕ್ಕೆ ದೊಡ್ಡ ಮಟ್ಟದ ಉತ್ತೇಜನ ಸಿಗಲಿದೆ.



