ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಸಿಕಂದರಾಬಾದ್ ರೈಲು ನಿಲ್ದಾಣಕ್ಕೆ ಆಗಮಿಸಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಬಳಿಕ ವಂದೇ ಭಾರತ್ ರೈಲಿಗೆ ಏರಿ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು. ಹಲವು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅವರ ಭುಜ ತಟ್ಟಿ ಪ್ರೋತ್ಸಾಹಿಸಿದರು. ಬಳಿಕ ಪರೇಡ್ ಮೈದಾನದಲ್ಲಿ ಏರ್ಪಡಿಸಿದ್ದ ಬೃಹತ್ ಸಾರ್ವಜನಿಕ ಸಭೆಗೆ ಆಗಮಿಸಿದರು. ಈ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ.
ಪ್ರಧಾನಿಯವರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಒಟ್ಟು 11 ಸಾವಿರ ಕೋಟಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. 1365.95 ಕೋಟಿ ಮೌಲ್ಯದ ಬೀಬಿ ನಗರದಲ್ಲಿ 750 ಹಾಸಿಗೆಯಿರುವ ಏಮ್ಸ್ ಆಸ್ಪತ್ರೆ, ತೆಲಂಗಾಣದಲ್ಲಿ 410 ಕಿಮೀ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮತ್ತು ಅಭಿವೃದ್ಧಿ ಕಾಮಗಾರಿ, 720 ಕೋಟಿ ಸಿಕಂದರಾಬಾದ್ ರೈಲ್ವೆ ಅಭಿವೃದ್ಧಿಗೆ ಶಂಕುಸ್ಥಾಪನೆ ಕಾಮಗಾರಿಗೆ ಶಂಕುಸ್ಥಾಪನೆ ಮುಂತಾದ ಕಾಮಗಾರಿಗಳು ನಡೆಯಲಿವೆ.
ಅಲ್ಲದೆ, ಸಿಕಂದರಾಬಾದ್ – ಮೇಡ್ಚಲ್ ಮತ್ತು ಫಲಕ್ ನಾಮಾ – ವಾಜಾನಗರ ಮಾರ್ಗಗಳಲ್ಲಿ 13 MMTS ರೈಲು ಸೇವೆಗಳನ್ನು ಪ್ರಾರಂಭಿಸಲಾಗುವುದು. ಮೊದಲ ಹಂತದಲ್ಲಿ 44 ಕಿಮೀ ಮತ್ತು ಎರಡನೇ ಹಂತದಲ್ಲಿ 51 ಕಿಮೀವರೆಗೆ ಎಂಎಂಟಿಎಸ್ ಲಭ್ಯವಾಗಲಿದೆ.