ಅದಂಪುರ ವಾಯುನೆಲೆಯಲ್ಲಿ ʼರಿಯಲ್‌ ಹೀರೋಗಳʼ ಜೊತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಪಂಜಾಬ್​ನ ಅದಂಪುರ ವಾಯುನೆಲೆಗೆ ಭೇಟಿ ನೀಡಿದ್ದು, ವಾಯುಪಡೆಯ ಸಿಬ್ಬಂದಿಯ ಬಳಿ ಮಾಹಿತಿ ಪಡೆದಿದ್ದಾರೆ.

ಹಾಗೇ, ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಸೈನಿಕರು ಸಂತೋಷದಿಂದ ಪ್ರಧಾನಿ ಮೋದಿಯವರನ್ನು ಸುತ್ತುವರೆದು ಮಾತುಕತೆ ನಡೆಸುತ್ತಿರುವ ಫೋಟೋಗಳನ್ನು ಪ್ರಧಾನಮಂತ್ರಿ ಕಚೇರಿ ಹಂಚಿಕೊಂಡಿದೆ.

ಭಾರತದ “ಆಪರೇಷನ್ ಸಿಂದೂರ ನಂತರ, ಮೇ 9 ಮತ್ತು 10ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಮ್‌ಪುರವೂ ಒಂದು. ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಕೆಲವು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಇಂದು ಪಂಜಾಬ್‌ನ ಅದಮ್‌ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!