ಹೊಸದಿಗಂತ ಡಿಜಿಟಲ್ ಡೆಸ್ಕ್:
2024ರ ಜನವರಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ ಎಂದು ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಬುಧವಾರ ತಿಳಿಸಿದ್ದಾರೆ.
ಥಿಂಕ್ ಟ್ಯಾಂಕ್‌ನಲ್ಲಿ ನಡೆದ ಕಾರ್ಯಕ್ರಮದ ಅಂಚಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಾರ್ಸೆಟ್ಟಿ, ಸೆಪ್ಟೆಂಬರ್‌ನಲ್ಲಿ ಜಿ 20 ಶೃಂಗಸಭೆಯ ಅಂಚಿನಲ್ಲಿ ನಡೆದ ದ್ವಿಪಕ್ಷೀಯ ಸಭೆಯಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಲು ಪ್ರೆಸಿಡೆಬ್ಟ್ ಬಿಡೆನ್ ಅವರಿಗೆ ಪ್ರಧಾನಿ ಮೋದಿ ಆಹ್ವಾನ ನೀಡಿದರು ಎಂದು ಮಾಹಿತಿ ನೀಡಿದ್ದಾರೆ.
ಅಧ್ಯಕ್ಷರಾದ ನಂತರ ಬಿಡೆನ್ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ತಮ್ಮ ಮೊದಲ ಭೇಟಿ ನೀಡಿದ್ದರು.