ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಂಡೀಗಢ-ದಿಬ್ರುಗಢ ರೈಲು ಅಪಘಾತಕ್ಕೆ ಪ್ರಧಾನಿ ಹೊಣೆಯಾಗಬೇಕು ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಭಾರತೀಯ ರೈಲ್ವೇಯಲ್ಲಿ ಉಂಟಾಗಿರುವ ಬೃಹತ್ ಲೋಪಗಳಿಗೆ ಪ್ರಧಾನಿ ಹೊಣೆಯಾಗಬೇಕು ಎಂದು ಹೇಳಿದ್ದಾರೆ.
ರೈಲು ಹಳಿ ತಪ್ಪಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವಿಗೀಡಾಗಿದ್ದು 60 ಮಂದಿ ಗಾಯಗೊಂಡಿದ್ದಾರೆ. ಯುಪಿಯಲ್ಲಿ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್ ಹಳಿತಪ್ಪಿರುವುದು ಮೋದಿ ಸರ್ಕಾರವು ರೈಲು ಸುರಕ್ಷತೆಯನ್ನು ಹೇಗೆ ವ್ಯವಸ್ಥಿತವಾಗಿ ಅಪಾಯಕ್ಕೆ ತಳ್ಳಿದೆ ಎಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದೆ. ದುಃಖತಪ್ತರ ಕುಟುಂಬಗಳಿಗೆ ನಮ್ಮ ತೀವ್ರ ಸಂತಾಪಗಳು. ಗಾಯಾಳುಗಳು ಗುಣಮುಖವಾಲಿ ಎಂದು ನಾವು ಪಾರ್ಥಿಸುತ್ತೇವೆ ಎಂದು ಖರ್ಗೆ ಎಕ್ಸ್‌ನಲ್ಲಿ ಬರೆದಿದ್ದಾರೆ.
ಸ್ವಂತ ಪ್ರಚಾರಕ್ಕಾಗಿ ಯಾವುದೇ ಅವಕಾಶವನ್ನು ಬಿಡದ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ರೈಲ್ವೆ ಸಚಿವರು ಭಾರತೀಯ ರೈಲ್ವೇಯನ್ನು ಬಾಧಿಸಿರುವ ಬೃಹತ್ ಲೋಪಗಳಿಗೆ ನೇರ ಹೊಣೆಗಾರಿಕೆಯನ್ನು ಹೊರಬೇಕು. ನಮ್ಮ ಒಂದೇ ಬೇಡಿಕೆ ಕವಚ್ ವಿರೋಧಿ ಘರ್ಷಣೆ ವ್ಯವಸ್ಥೆಯನ್ನು ತ್ವರಿತವಾಗಿ ಅಳವಡಿಸಬೇಕು. ವರ್ಧಿತ ಸುರಕ್ಷತಾ ಕ್ರಮಗಳನ್ನು ಖಚಿತಪಡಿಸಿ ಅಪಘಾತಗಳನ್ನು ತಡೆಗಟ್ಟಬೇಕು ಎಂದು ಅವರು ಹೇಳಿದ್ದಾರೆ.