ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಾರಿಷಸ್ನ 57ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಬಗ್ಗೆ ಮಾರಿಷಸ್ ಪ್ರಧಾನಿ ನವೀನ್ ರಾಮ್‌ಗೂಲಂ ಅವರು ಹೇಳಿದ್ದಾರೆ.
ಮಾ.11 ಮತ್ತು ಮಾ.12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾರಿಷಸ್ ರಾಷ್ಟ್ರದ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.
‘ನನ್ನ ಆಹ್ವಾನದ ಮೇರೆಗೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಮ್ಮ ರಾಷ್ಟ್ರೀಯ ದಿನಾಚರಣೆಯ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲು ಪ್ರೀತಿಯಿಂದ ಒಪ್ಪಿಕೊಂಡಿದ್ದಾರೆ ಎಂದು ಸದನಕ್ಕೆ ತಿಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ’ ಎಂದು ರಾಮ್‌ಗೂಲಂ ಹೇಳಿದ್ದಾರೆ.
‘ಪ್ರಧಾನಿ ಮೋದಿಯವರ ಬಿಡುವಿಲ್ಲದ ವೇಳಾಪಟ್ಟಿ ಮತ್ತು ಇತ್ತೀಚಿನ ಪ್ಯಾರಿಸ್ ಮತ್ತು ಅಮೆರಿಕ ಭೇಟಿಗಳ ನಡುವೆಯೂ ನಮ್ಮ ಗೌರವವನ್ನು ಸ್ವೀಕರಿಸಿ, ದೇಶಕ್ಕೆ ಆಗಮಿಸುತ್ತಿರುವುದು ನಮ್ಮ ದೇಶಕ್ಕೆ ನಿಜಕ್ಕೂ ಒಂದು ಸೌಭಾಗ್ಯ. ಮೋದಿಯವರ ಭೇಟಿ ನಮ್ಮ ಎರಡೂ ರಾಷ್ಟ್ರಗಳ ನಡುವಿನ ನಿಕಟ ಸಂಬಂಧಕ್ಕೆ ಸಾಕ್ಷಿಯಾಗಿದೆ’ ಎಂದು ಮಾರಿಷಸ್ ಪ್ರಧಾನಿ ಹೇಳಿದ್ದಾರೆ.