ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ ಪ್ರಧಾನಿ ಮೋದಿ: ನಾರಾಯಣ ಮೂರ್ತಿ

ಹೊಸ ದಿಗಂತ ಡಿಜಿಟಿಲ್ ಡೆಸ್ಕ್:

ಕೆಲವು ತಿಂಗಳ ಹಿಂದೆ ವಾರದಲ್ಲಿ 70 ಗಂಟೆ ಕೆಲಸ ಮಾಡಬೇಕು ಎಂಬ ಹೇಳಿಕೆ ನೀಡಿ ಸುದ್ದಿಯಲ್ಲಿದ್ದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರ ಇದೀಗ ಮತ್ತೊಂದು ಹೇಳಿಕೆ ವೈರಲ್​ ಆಗಿದೆ.

ಮುಂಬೈನಿಂದ ಬೆಂಗಳೂರಿಗೆ ವಿಮಾನ ಪ್ರಯಾಣ ಮಾಡುವ ವೇಳೆ ಎನ್.ಆರ್. ನಾರಾಯಣ ಮೂರ್ತಿ ಅವರನ್ನು ಅನಿರೀಕ್ಷಿತವಾಗಿ ತೇಜಸ್ವಿ ಸೂರ್ಯ ಭೇಟಿಯಾಗಿದ್ದಾರೆ. ಈ ಭೇಟಿಯ ಬಗ್ಗೆ ತಮ್ಮ ಎಕ್ಸ್​​ನಲ್ಲಿ ತೇಜಸ್ವಿ ಸೂರ್ಯ ಹಂಚಿಕೊಂಡಿದ್ದಾರೆ. ಈ ವೇಳೆ ಅವರ ಮಾತಿನ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಈ ಭೇಟಿಯನ್ನು ತೇಜಸ್ವಿ ಸೂರ್ಯ ಅವರು ಭಾರತದ ಭವಿಷ್ಯ ಮತ್ತು ನಾಯಕತ್ವದ ಕುರಿತು ‘ಎರಡು ಗಂಟೆಗಳ ಮಾಸ್ಟರ್‌ಕ್ಲಾಸ್’ ಎಂದು ಬಣ್ಣಿಸಿದರು.

ಭಾರತದ ತಂತ್ರಜ್ಞಾನ ಭೂದೃಶ್ಯವನ್ನು ಪರಿವರ್ತಿಸಿದ ಮತ್ತು ಇನ್ಫೋಸಿಸ್ ಮೂಲಕ ಲಕ್ಷಾಂತರ ಮಧ್ಯಮ ವರ್ಗದ ಕುಟುಂಬಗಳಿಗೆ ಕೆಲಸವನ್ನು ಸೃಷ್ಟಿಸಿದ ಕೀರ್ತಿಗೆ ಪಾತ್ರರಾದ ಐಟಿ ಪ್ರವರ್ತಕರೊಂದಿಗೆ ಬಹುದೊಡ್ಡ ಸ್ಪೂರ್ತಿದಾಯಕ ಸಂಭಾಷಣೆ ನಡೆಸಿದೆ ಎಂದು ಎಕ್ಸ್​​ನಲ್ಲಿ ಬರೆದುಕೊಂಡಿದ್ದಾರೆ.

https://x.com/Tejasvi_Surya/status/1945144557597024420?ref_src=twsrc%5Etfw%7Ctwcamp%5Etweetembed%7Ctwterm%5E1945144557597024420%7Ctwgr%5Ee20eb16dd7ff3bc63f0d13f792635bf48bf2847e%7Ctwcon%5Es1_&ref_url=https%3A%2F%2Ftv9kannada.com%2Ftrending%2Fonly-pm-modi-works-100-hours-a-week-narayana-murthy-is-trending-again-1053731.html

AI ನಿಂದ ಉತ್ಪಾದನೆಯವರೆಗೆ, ನಮ್ಮ ನಗರಗಳ ಸ್ಥಿತಿ, ಯುವಕರ ಕೌಶಲ್ಯವರ್ಧನೆ, ನೀತಿಶಾಸ್ತ್ರ ಮತ್ತು ನಾಯಕತ್ವ, ಪ್ರತಿಯೊಂದು ವಿಷಯಕ್ಕೂ NRN ತರುವ ಜ್ಞಾನ ಮತ್ತು ಸ್ಪಷ್ಟತೆಯ ವಿಸ್ತಾರದ ಬಗ್ಗೆ ನಾನು ಅವರೊಂದಿಗೆ ಮಾತನಾಡಿದ್ದೇನೆ. ಈ ವೇಳೆ ಹಾಸ್ಯವಾಗಿ 70 ಗಂಟೆ ಕೆಲಸದ ಬಗ್ಗೆಯೂ ಹಂಚಿಕೊಂಡಿದ್ದಾರೆ ಎಂದು ಸೂರ್ಯ ಹೇಳಿದ್ದಾರೆ.

ರಾಷ್ಟ್ರೀಯ ಅಭಿವೃದ್ಧಿಯನ್ನು ಹೆಚ್ಚಿಸಲು ಯುವ ಭಾರತೀಯರು ಹೆಚ್ಚು ಸಮಯ ಕೆಲಸ ಮಾಡಬೇಕು ಎಂಬ ಮೂರ್ತಿಯವರ ಸಲಹೆ. ಈ ವೇಳೆ ನಾರಾಯಣ ಮೂರ್ತಿ ಅವರು ಹೇಳಿದ ಒಂದು ವಿಚಾರದ ಬಗ್ಗೆ ತುಂಬಾ ಖುಷಿಯಿಂದ ಹಂಚಿಕೊಂಡಿದ್ದಾರೆ. ನಾನು 70 ಗಂಟೆ ಕೆಲಸದ ಬಗ್ಗೆ ಮಾತನಾಡಿದಾಗ ಅವರು ನಕ್ಕು ಹೇಳಿದ ಮಹತ್ವದ ಮಾತು ಏನೆಂದರೆ ನನಗೆ ತಿಳಿದಿರುವಂತೆ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ ಪ್ರಧಾನಿ ಮೋದಿ ಎಂದು ನಾರಾಯಣ ಮೂರ್ತಿ ಹೇಳಿದ್ದಾರೆ.

ಈ ಹಿಂದೆ ನಾರಾಯಣ ಮೂರ್ತಿ ಅವರು ಯುವಕರು ವಾರದಲ್ಲಿ 70 ಗಂಟೆ ದುಡಿಯಬೇಕು ಎಂಬ ಹೇಳಿಕೆಗೆ ಭಾರೀ ಚರ್ಚೆಗಳು ನಡೆದಿತ್ತು. ಕೆಲವರು ಇದನ್ನು ರಾಷ್ಟ್ರೀಯ ಕರ್ತವ್ಯಕ್ಕೆ ಕರೆ ಎಂದು ಶ್ಲಾಘಿಸಿದರೆ, ಇನ್ನು ಕೆಲವರು ಇದನ್ನು ಅಪ್ರಾಯೋಗಿಕ ಎಂದು ಟೀಕಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!