ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್‌ನಿಂದ ಸತತವಾಗಿ ಭಾರತೀಯ ವಿದ್ಯಾರ್ಥಿಗಳ ಏರ್‌ಲಿಫ್ಟ್ ಮಾಡಲಾಗುತ್ತಿದ್ದು, ಆಪರೇಷನ್ ಗಂಗಾ ಕಾರ್ಯಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತದ ಭರವಸೆಯ ಸೇತುವೆಯಾಗಿ ಹೊರಹೊಮ್ಮಿದ್ದಾರೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಬಣ್ಣಿಸಿದ್ದಾರೆ.
ಈ ಬಗ್ಗೆ ದೇಶಿ ಕೂನಲ್ಲಿ ವ್ಯಂಗ್ಯಚಿತ್ರವೊಂದನ್ನು ಹಂಚಿಕೊಂಡಿರುವ ಅವರು, ‘ಪಿಎಂ ಮೋದಿ ಜೀ, ಇಂಡಿಯಾಸ್ ಬ್ರಿಡ್ಜ್ ಆಫ್ ಹೋಪ್’ ಎಂದು ಬರೆದುಕೊಂಡಿದ್ದಾರೆ.
ಈ ವ್ಯಂಗ್ಯಚಿತ್ರದಲ್ಲಿ ಪ್ರಧಾನಿ ನದಿಯಲ್ಲಿ ನಿಂತು ತನ್ನ ಬಾಹುಗಳ ಮೂಲಕ ವಿದ್ಯಾರ್ಥಿಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ವಿದ್ಯಾರ್ಥಿಗಳನ್ನು ತಲುಪಿಸುವ ಚಿತ್ರವಾಗಿದೆ.
ಇಲ್ಲಿ ಅಮೆರಿಕ, ಚೀನಾ ಹಾಗೂ ಪಾಕಿಸ್ತಾನ ಸೇರಿದಂತೆ ಇತರೆ ರಾಷ್ಟ್ರಗಳ ಪ್ರಜೆಗಳು ತಮ್ಮ ರಾಷ್ಟ್ರದ ಸಹಾಯವನ್ನುಚಾಚಿಗೊಂಡಿರುವ ವಿದ್ಯಾರ್ಥಿಗಳನ್ನು ಕಾಣಬಹುದು.
PM @NarendraModi ji, India's 'Bridge of Hope'
#OperationGanga pic.twitter.com/O3hZVPyGGS
— Piyush Goyal (@PiyushGoyal) March 3, 2022