ಟ್ರಂಪ್ ಸಾಮಾಜಿಕ ಮಾಧ್ಯಮ ವೇದಿಕೆ ‘ಟ್ರುತ್ ಸೋಶಿಯಲ್’ಗೆ ಪ್ರಧಾನಿ ಮೋದಿ ಸೇರ್ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪ್ರಧಾನಿ ನರೇಂದ್ರ ಮೋದಿ ಇಂದು ಡೊನಾಲ್ಡ್ ಟ್ರಂಪ್ ಮೀಡಿಯಾ ಒಡೆತನದ ಆಲ್ಟ್-ಟೆಕ್ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರುತ್ ಸೋಶಿಯಲ್‌ಗೆ ಸೇರಿದ್ದಾರೆ. ಭಾರತದ ಪ್ರಧಾನಿ ಮೋದಿ ಎರಡು “ಟ್ರುತ್ಸ್”ನೊಂದಿಗೆ ಇಂದು ಈ ಸಾಮಾಜಿಕ ಜಾಲತಾಣದ ವೇದಿಕೆಗೆ ಪಾದಾರ್ಪಣೆ ಮಾಡಿದರು.

ತಮ್ಮ ಮೊದಲ ಟ್ರುತ್‌ನಲ್ಲಿ, ಪ್ರಧಾನಿ ಮೋದಿ “ತಮ್ಮ ಉತ್ತಮ ಸ್ನೇಹಿತ” ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ವಿಶೇಷವಾದ ಫೋಟೋವನ್ನು ಹಂಚಿಕೊಂಡಿದ್ದಾರೆ. “ಟ್ರುತ್ ಸೋಶಿಯಲ್‌ನಲ್ಲಿರಲು ಸಂತೋಷವಾಗುತ್ತಿದೆ! ಇಲ್ಲಿರುವ ಎಲ್ಲಾ ಉತ್ಸಾಹಭರಿತ ಧ್ವನಿಗಳೊಂದಿಗೆ ಸಂವಹನ ನಡೆಸಲು ಮತ್ತು ಮುಂಬರುವ ದಿನಗಳಲ್ಲಿ ಅರ್ಥಪೂರ್ಣ ಸಂಭಾಷಣೆಗಳಲ್ಲಿ ತೊಡಗಿಸಿಕೊಳ್ಳಲು ಉತ್ಸುಕನಾಗಿದ್ದೇನೆ” ಎಂದು ಪ್ರಧಾನಿ ಮೋದಿ ತಮ್ಮ ಮೊದಲ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಧನ್ಯವಾದಗಳು, ನನ್ನ ಸ್ನೇಹಿತ, ಅಧ್ಯಕ್ಷ ಟ್ರಂಪ್. ನನ್ನ ಜೀವನ ಪಯಣ, ಭಾರತದ ನಾಗರಿಕತೆಯ ದೃಷ್ಟಿಕೋನ, ಜಾಗತಿಕ ಸಮಸ್ಯೆಗಳು ಮತ್ತು ಮುಂತಾದವುಗಳನ್ನು ಒಳಗೊಂಡಂತೆ ನಾನು ಹಲವು ವಿಷಯಗಳನ್ನು ಇಲ್ಲಿ ಹಂಚಿಕೊಂಡಿದ್ದೇನೆ ಎಂದು ಮೋದಿ ಟ್ರುತ್ ಸೋಷಿಯಲ್‌ನಲ್ಲಿ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!