ಮೂರು ರಾಷ್ಟ್ರಗಳ ಭೇಟಿ ಬಳಿಕ ದೆಹಲಿಗೆ ವಾಪಾಸಾದ ಪ್ರಧಾನಿ ನರೇಂದ್ರ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾ ಮೂರು ರಾಷ್ಟ್ರಗಳ ಭೇಟಿಯನ್ನು ಮುಗಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಗುರುವಾರ ನವದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಪ್ರಧಾನಿ ಮೋದಿ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ (MoS) ಮೀನಾಕ್ಷಿ ಲೇಖಿ, ಮಾಜಿ ಕೇಂದ್ರ ಸಚಿವ ಹರ್ಷವರ್ಧನ್, ದೆಹಲಿ ಸಂಸದ ರಮೇಶ್ ವಿಧುರಿ, ಹನ್ಸ್ ರಾಜ್ ಹನ್ಸ್ ಮತ್ತು ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಾಮ್ವೀರ್ ಸಿಂಗ್ ಬಿಧುರಿ ಸ್ವಾಗತಿಸಿದರು.

ಪಾಲಂ ವಿಮಾನ ನಿಲ್ದಾಣದ ಹೊರಗೆ ಹೆಚ್ಚಿನ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಜಮಾಯಿಸಿದರು. ಭಿತ್ತಿಪತ್ರಗಳು ಮತ್ತು ರಾಷ್ಟ್ರಧ್ವಜಗಳನ್ನು ಹಿಡಿದುಕೊಂಡು ಬಿಜೆಪಿ ಕಾರ್ಯಕರ್ತರು ಪ್ರಧಾನಿ ಆಗಮನಕ್ಕಾಗಿ ಕಾತರದಿಂದ ಕಾಯುತ್ತಿರುವ ದೃಶ್ಯಗಳು ಕಂಡುಬಂದವು.

https://twitter.com/i/status/1661525193330917377

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!