ಬೆಂಗಳೂರಿಗೆ ಬಂದಿಳಿದ ಪ್ರಧಾನಿ, ಇಸ್ರೋ ವಿಜ್ಞಾನಿಗಳನ್ನು ಭೇಟಿಯಾಗಲು ಎದುರು ನೋಡುತ್ತಿರುವುದಾಗಿ ಟ್ವೀಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್‌ಗೆ ಎರಡು ರಾಷ್ಟ್ರಗಳ ಭೇಟಿ ಮುಗಿಸಿ ನೇರವಾಗಿ ಶನಿವಾರ ಬೆಳಗ್ಗೆ ಕರ್ನಾಟಕದ ಬೆಂಗಳೂರಿಗೆ ಬಂದಿಳಿದರು.

“ಬೆಂಗಳೂರಿನಲ್ಲಿ ಬಂದಿಳಿದಿದ್ದೇನೆ. ಚಂದ್ರಯಾನ-3ರ ಯಶಸ್ಸಿನಿಂದ ಭಾರತಕ್ಕೆ ಹೆಮ್ಮೆ ತಂದಿರುವ ನಮ್ಮ ಅಸಾಧಾರಣ @isro ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲು ಎದುರು ನೋಡುತ್ತಿದ್ದೇವೆ! ಅವರ ಸಮರ್ಪಣೆ ಮತ್ತು ಉತ್ಸಾಹವು ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ರಾಷ್ಟ್ರದ ಸಾಧನೆಗಳ ಹಿಂದಿನ ಪ್ರೇರಕ ಶಕ್ತಿಗಳು” ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ಗ್ರೀಸ್‌ನಿಂದ ನೇರವಾಗಿ ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ ಇಲ್ಲಿ ಶನಿವಾರ ಚಂದ್ರಯಾನ-3 ಮಿಷನ್‌ನಲ್ಲಿ ಭಾಗಿಯಾಗಿರುವ ಇಸ್ರೋ ತಂಡದ ವಿಜ್ಞಾನಿಗಳನ್ನು ಭೇಟಿಯಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!