ಹೊಸದಿಗಂತ ಆನ್ಲೈನ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ಆರೋಗ್ಯ ಮೂಲಸೌಕರ್ಯ ಬಲಪಡಿಸಲು 64,180 ಕೋಟಿ ಮೌಲ್ಯದ ಪ್ರಧಾನ ಮಂತ್ರಿ ಆತ್ಮನಿರ್ಭರ್ ಸ್ವಸ್ತ ಭಾರತ್ ಯೋಜನೆಗೆ ಇಂದು ಚಾಲನೆ ನೀಡಲಿದ್ದಾರೆ.
ವಾರಣಾಸಿಯಿಂದ ಯೋಜನೆ ಉದ್ಘಾನಟೆಯಾಗಲಿದ್ದು, ಸಿದ್ಧಾರ್ಥ್ ನಗರದಲ್ಲಿ ಒಂಬತ್ತು ಹೊಸ ವೈದ್ಯಕೀಯ ಕಾಲೇಜುಗಳನ್ನು ಅವರು ಉದ್ಘಾಟಿಸಲಿದ್ದಾರೆ.
ದೇಶಾದ್ಯಂತ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ ಅತಿದೊಡ್ಡ ಪ್ಯಾನ್ ಇಂಡಿಯಾ ಯೋಜನೆಗಳಲ್ಲಿ ಇದೂ ಒಂದಾಗಿದೆ. ಪ್ರಾಥಮಿಕ, ಮಾಧ್ಯಮಿಕ ಹಾಗೂ ತೃತೀಯ ಮತ್ತು ಪ್ರಸ್ತುತ ಹಾಗೂ ಭವಿಷ್ಯದ ಸಾಂಕ್ರಾಮಿಕ ರೋಗಗಳು ಮತ್ತು ವಿಪತ್ತುಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಲು ಆರೋಗ್ಯ ರಕ್ಷಣಾ ವ್ಯವಸ್ಥೆ ಸಿದ್ಧಪಡಿಸುವ ಎಲ್ಲಾ ಹಂತದಲ್ಲೂ ಆರೋಗ್ಯ ನಿರಂತರ ಆರೈಕೆಯಾಗಿದೆ.ಹಾಗಾಗಿ ಆರೋಗ್ಯ ವ್ಯವಸ್ಥೆಗಳು ಮತ್ತು ಸಂಸ್ಥೆಗಳ ಸಾಮರ್ಥ್ಯ ಅಭಿವೃದ್ಧಿಪಡಿಸಲು ಈ ಯೋಜನೆ ಕೇಂದ್ರೀಕೃತವಾಗಿದೆ.
ಯೋಜನೆಯಲ್ಲಿ 10ಕ್ಕೂ ಹೆಚ್ಚು ಕೇಂದ್ರೀಕೃತ ರಾಜ್ಯಗಳಲ್ಲಿ 17,788 ಗ್ರಾಮೀಣ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಿಗೆ ಸರ್ಕಾರ ಬೆಂಬಲ ಒದಗಿಸಲಿದೆ. ಕನಿಷ್ಠ 11,028 ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸ್ಥಾಪನೆ, 500,000ಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಜಿಲ್ಲೆಗಳಲ್ಲಿ ಕ್ರಿಟಿಕಲ್ ಕೇರ್ ಲಭ್ಯವಿರುತ್ತದೆ.