ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ಅವರು ಮಾ.19ರಂದು ಧಾರವಾಡ ಜಿಲ್ಲೆಗೆ ಆಗಮಿಸುವ ಸಾಧ್ಯತೆ ಇದೆ, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸುತ್ತಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಧಾರವಾಡದಲ್ಲಿ ಕಾರ್ಯಕ್ರಮದ ಸಿದ್ಧತೆ ಬಗ್ಗೆ ಬಿಜೆಪಿ ಮಹಾನಗರ ಹಾಗೂ ಗ್ರಾಮಾಂತರ ಜಿಲ್ಲಾಧ್ಯಕ್ಷರಿಗೆ ಸಲಹೆ ನೀಡಿದ್ದೇನೆ. ಸಮಾರಂಭ ಎಲ್ಲಿ ಆಗುತ್ತದೆ ಎಂದು ಕೆಲವೇ ದಿನದಲ್ಲಿ ನಿರ್ಧಾರವಾಗಲಿದೆ ಎಂದಿದ್ದಾರೆ.
ಪ್ರಧಾನಿ ಮೋದಿ ಅವರು ಈ ಹಿಂದೆ ಧಾರವಾಡಕ್ಕೆ ಬಂದಾಗ ಐತಿಹಾಸಿಕ ಕಾರ್ಯಕ್ರಮ ನಡೆದಿತ್ತು. ಈಗ ಅದಕ್ಕಿಂತಲೂ ಬೃಹತ್ ಮಟ್ಟದ ರ‍್ಯಾಲಿ ನಡೆಯಲಿದೆ ಎಂದಿದ್ದಾರೆ.