ಬಿಜೆಪಿ ಆಡಳಿತ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಜೆಪಿ ಆಡಳಿತವಿರುದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಜತೆ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಹಲವಾರು ವಿಷಯಗಳ ಕುರಿತು ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ (ಉತ್ತರ ಪ್ರದೇಶ), ಹಿಮಂತ ಬಿಸ್ವ ಶರ್ಮಾ (ಅಸ್ಸಾಂ), ಭಜನ್‌ಲಾಲ್ ಶರ್ಮಾ (ರಾಜಸ್ಥಾನ) ಮತ್ತು ಮೋಹನ್ ಚರಣ್ ಮಾಝಿ (ಒಡಿಶಾ) ಉಪಸ್ಥಿತರಿದ್ದರು. ಲೋಕಸಭೆ ಚುನಾವಣೆಯ ಫಲಿತಾಂಶ ಹಾಗೂ ಕೇಂದ್ರ ಬಜೆಟ್ ಬಳಿಕ ನಡೆದ ಬಿಜೆಪಿ ಸಿಎಂಗಳ ಮೊದಲ ಸಭೆ ಇದಾಗಿದೆ.

ಮಧ್ಯಪ್ರದೇಶ, ಉತ್ತರಾಖಂಡ, ಅರುಣಾಚಲ ಪ್ರದೇಶ, ಗೋವಾ, ಹರಿಯಾಣ, ಮಣಿಪುರ, ಛತ್ತೀಸಗಢದ ಮುಖ್ಯಮಂತ್ರಿಗಳು ಸಹ ಭಾಗವಹಿಸಿದ್ದರು.

ಭಾನುವಾರವೂ ಸಭೆ ಮುಂದುವರಿಯಲಿದ್ದು, ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಕುರಿತು ಸಭೆಯಲ್ಲಿ ಪರಾಮರ್ಶೆ ನಡೆಸುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!