ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ರನ್ನು ಭೇಟಿಯಾದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ತಿಂಗಳು ಹಿಂದೆ ನಡೆದ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಮಹಿಳಾ ಬಾಕ್ಸರ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ಮಾಡಿದರು. ಈ ಚಾಂಪಿಯನ್‌ಶಿಪ್‌ ನಲ್ಲಿ ಭಾರತ ಒಂದು ಚಿನ್ನ ಮತ್ತು ಎರಡು ಕಂಚಿನ ಪದಕಗಳನ್ನು ಜಯಿಸಿದೆ. ಈ ಸಾಧಕರೊಂದಿಗೆ ಪ್ರಧಾನಿ ಮೋದಿ ಕೆಲ ನಿಮಿಷಗಳ ಕಾಲ ಚರ್ಚೆ ನಡೆಸಿದರು.
ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಮಹಿಳಾ ಬಾಕ್ಸರ್‌ಗಳಾದ ನಿಖತ್ ಜರೀನ್, ಮನೀಶಾ ಮೌನ್ ಮತ್ತು ಪರ್ವೀನ್ ಹೂಡಾ ಅವರನ್ನು ಭೇಟಿ ವೇಳೆ ಪ್ರಧಾನಿ ಮೋದಿ ಅವರ ಸಾಧನಾ ಹಾದಿ ಬಗ್ಗೆ ಮಾಹಿತಿ ಕಲೆ ಹಾಕಿದರು.
ನಿಖತ್ ಜರೀನ್ ಅವರು ಮೇರಿ ಕೋಮ್, ಸರಿತಾ ದೇವಿ, ಜೆನ್ನಿ ಆರ್‌ಎಲ್ ಮತ್ತು ಲೇಖಾ ಕೆಸಿ ಅವರನ್ನು ಸೇರಿಕೊಂಡು ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಐದನೇ ಭಾರತೀಯ ಬಾಕ್ಸರ್ ಎನಿಸಿಕೊಂಡರು. ಮನೀಶಾ ಮೌನ್ ಮತ್ತು ಪರ್ವೀನ್ ಹೂಡಾ ಕ್ರಮವಾಗಿ 57 ಕೆಜಿ ಮತ್ತು 63 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!