ದಕ್ಷಿಣ ರಾಜ್ಯಗಳಿಗೆ ಪ್ರಧಾನಿ ಭೇಟಿ:2ದಿನಗಳ ಪ್ರವಾಸದಲ್ಲಿ ಹಲವು ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಾಳೆಯಿಂದ ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ನವೆಂಬರ್ 11 ಮತ್ತು 12 ರಂದು ಎರಡು ದಿನಗಳ ಕಾಲ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಪ್ರವಾಸ ಮಾಡಲಿದ್ದಾರೆ. 25 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನಡೆಯಲಿದೆ. ಈ ಸಂದರ್ಭದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ.

ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಪ್ರಧಾನಿಯವರ ಹಸ್ತದಿಂದ ಅನಾವರಣಗೊಳ್ಳಲಿದೆ.

ಎರಡು ದಿನಗಳ ಪ್ರವಾಸದಲ್ಲಿ ಪ್ರಧಾನಿ ಕಾರ್ಯಕ್ರಮಗಳು

* ನವೆಂಬರ್ 11 ರಂದು ಬೆಳಿಗ್ಗೆ 9:45 ಕ್ಕೆ ಬೆಂಗಳೂರಿನ ವಿಧಾನಸೌಧದ ಶಾಸಕರ ಭವನದಲ್ಲಿ ಶ್ರೀ ಕನಕದಾಸ ಮತ್ತು ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ.
* ಬೆಳಿಗ್ಗೆ 10:20 ಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್, ಭಾರತ್ ಗೌರವ್ ಕಾಶಿ ದರ್ಶನ್ ರೈಲುಗಳಿಗೆ ಚಾಲನೆ.
* ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಅನ್ನು ಬೆಳಿಗ್ಗೆ 11:30 ಕ್ಕೆ ಉದ್ಘಾಟನೆ.
* ಮಧ್ಯಾಹ್ನ 12 ಗಂಟೆಗೆ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಅನಾವರಣ.
* ಮಧ್ಯಾಹ್ನ 12:30ಕ್ಕೆ ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆ.
* ಮಧ್ಯಾಹ್ನ 3:30 ಕ್ಕೆ, ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಗಾಂಧಿಗ್ರಾಮ್ ರೂರಲ್ ಇನ್‌ಸ್ಟಿಟ್ಯೂಟ್‌ನ 36 ನೇ ಘಟಿಕೋತ್ಸವದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.
* ನವೆಂಬರ್ 12 ರಂದು ಬೆಳಿಗ್ಗೆ 10:30 ಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಮೋದಿ ಹಲವಾರು ಯೋಜನೆಗಳ ಉದ್ಘಾಟನಾ ಸಮಾರಂಭ ಮತ್ತು ಶಂಕುಸ್ಥಾಪನೆಯಲ್ಲಿ ಭಾಗವಹಿಸಲಿದ್ದಾರೆ.
* 12ರಂದು ಮಧ್ಯಾಹ್ನ 3:30ಕ್ಕೆ ತೆಲಂಗಾಣದ ರಾಮಗುಂಡಂನಲ್ಲಿ ಆರ್‌ಎಫ್‌ಸಿಎಲ್‌ ಘಟಕ ಉದ್ಘಾಟನೆ.
* ತೆಲಂಗಾಣದ ರಾಮಗುಂಡಂ ರಸಗೊಬ್ಬರ ಕಾರ್ಖಾನೆ ದೇಶಕ್ಕೆ ಸಮರ್ಪಣೆ.
* ಭದ್ರಾಚಲಂ ರಸ್ತೆ-ಸಾತುಪಲ್ಲಿ ರೈಲು ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಣೆ.
* ರೂ. 2200 ಕೋಟಿ ವೆಚ್ಚದ ಮೇದಕ್-ಸಿದ್ದಿಪೇಟೆ-ಎಲ್ಕತುರ್ಥಿ, ಬೋಧನ್-ಬಾಸರ-ಭೈಂಸಾ ರಸ್ತೆ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!