Sunday, August 14, 2022

Latest Posts

ವೆಂಟಿಲೇಟರ್​​ಗಳ ಸ್ಥಾಪನೆ, ಕಾರ್ಯನಿರ್ವಹಣೆ ಕುರಿತು ಆಡಿಟ್ ಗೆ ಪ್ರಧಾನಿ ಮೋದಿ ಆದೇಶ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಒದಗಿಸಲಾಗಿರುವ ವೆಂಟಿಲೇಟರ್​​ಗಳ ಸ್ಥಾಪನೆ ಮತ್ತು ಕಾರ್ಯನಿರ್ವಹಣೆ ಬಗ್ಗೆ ಕೂಡಲೇ ಆಡಿಟ್​ ಮಾಡಿ ವರದಿ ಸಲ್ಲಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆದೇಶಿಸಿದ್ದಾರೆ.

ಇಂದು ಭಾರತದ ಕೋವಿಡ್​ ಸನ್ನಿವೇಶವನ್ನು ಸಮೀಕ್ಷೆ ನಡೆಸಲು ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ, ಕೆಲವು ರಾಜ್ಯಗಳಲ್ಲಿ ವೆಂಟಿಲೇಟರ್​ಗಳು ಬಳಸಲ್ಪಡದೆ ಶೇಖರಿಸಿಡಲಾಗಿವೆ ಎಂಬ ವರದಿಗಳ ಬಗ್ಗೆ ಗಂಭೀರ ಕಾಳಜಿ ವ್ಯಕ್ತಪಡಿಸಿದರು.

ಈ ವೇಳೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ ನೀಡಲಾಗಿರುವ ವೆಂಟಿಲೇಟರ್​ಗಳ ಇನ್​​ಸ್ಟಲೇಷನ್ ಮತ್ತು ಆಪರೇಷನ್ ಬಗೆಗೆ ಕೂಡಲೇ ಒಂದು ಆಡಿಟ್ ನಡೆಸಬೇಕೆಂದು ನಿರ್ದೇಶನ ನೀಡಿದರು.

ಅಗತ್ಯವಿದ್ದಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ವೆಂಟಿಲೇಟರ್​ಗಳನ್ನು ಆಪರೇಟ್​ ಮಾಡುವ ಬಗ್ಗೆ ರಿಫ್ರೆಷರ್​ ತರಬೇತಿಯನ್ನು ಆರೋಗ್ಯಸೇವಾ ಕಾರ್ಯಕರ್ತರಿಗೆ ನೀಡಬೇಕು ಎಂದು ಹೇಳಿದ್ದಾರೆ ಎಂದು ಸರ್ಕಾರದ ಅಧಿಕೃತ ಹೇಳಿಕೆ ತಿಳಿಸಿದೆ.

ಪ್ರಯತ್ನಗಳಿಗೆ ಪ್ರತಿಕೂಲವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ಬಂದರೂ ಯಾವುದೇ ಒತ್ತಡಕ್ಕೊಳಗಾಗದೆ ಕೋವಿಡ್-19 ಸಂಖ್ಯೆಗಳ ಪಾರದರ್ಶಕ ವರದಿಯನ್ನು ರಾಜ್ಯಗಳು ಪ್ರೋತ್ಸಾಹಿಸಬೇಕು. ಕೋವಿಡ್-19 ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯನ್ನು ಅನೇಕ ರಾಜ್ಯಗಳು ಮರೆ ಮಾಚುತ್ತಿವೆ ಎಂಬ ವರದಿಗಳ ಬೆನ್ನಲ್ಲೇ ಪ್ರಧಾನಿ ಈ ರೀತಿಯ ಹೇಳಿಕೆ ನೀಡಿದರು.

ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ಆಮ್ಲಜನಕ ಪೂರೈಕೆಯನ್ನು ಖಾತ್ರಿಗೊಳಿಸುವ ವಿತರಣಾ ಯೋಜನೆಯನ್ನು ರೂಪಿಸಬೇಕು. ಅಂತಹ ಸಲಕರಣೆಗಳ ಕಾರ್ಯಾಚರಣೆಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಅಗತ್ಯ ತರಬೇತಿ ನೀಡಬೇಕು ಎಂದು ಅವರು ಹೇಳಿದರು. ಅಂತಹ ವೈದ್ಯಕೀಯ ಸಾಧನಗಳ ಸುಗಮ ಕಾರ್ಯಾಚರಣೆಗೆ ವಿದ್ಯುತ್ ಸರಬರಾಜನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಪಿಎಂಒ ಕಚೇರಿ ಹೇಳಿದೆ.

ಕೋವಿಡ್-19 ಮೊದಲ ಅಲೆಯಲ್ಲಿ ಗ್ರಾಮೀಣ ಪ್ರದೇಶಗಳು ಹೆಚ್ಚಿನ ಭಾದಿತವಾಗಿರಲಿಲ್ಲ. ಆದರೆ, ಎರಡನೇ ಅಲೆಯಲ್ಲಿ ಅನೇಕ ರಾಜ್ಯಗಳಲ್ಲಿ ಗ್ರಾಮೀಣ ಪ್ರದೇಶಗಳೂ ಗಂಭೀರ ಪರಿಣಾಮ ಎದುರಿಸುತ್ತಿವೆ.ಈ ಹಿನ್ನೆಲೆ ಎಲ್ಲಾ ಅಗತ್ಯ ಸಲಕರಣೆಗಳೊಂದಿಗೆ ಅಂಗನವಾಡಿ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರನ್ನು ಬಲಪಡಿಸಬೇಕು ಎಂದು ಪ್ರಧಾನಿ ಮೋದಿ ಕೋರಿದ್ದಾರೆ.

ಹೆಚ್ಚಿನ ಪಾಸಿಟಿವಿಟಿ ದರಗಳು ಇರುವ ಪ್ರದೇಶಗಳಲ್ಲಿ ಆರ್ ಟಿ- ಪಿಸಿಆರ್, ರಾಪಿಡ್ ಟೆಸ್ಟ್ ಗಳನ್ನು ಹೆಚ್ಚಿಸಬೇಕು.ಮಾರ್ಚ್ ಆರಂಭದಲ್ಲಿ ವಾರಕ್ಕೆ ಸುಮಾರು 50 ಲಕ್ಷ ಪರೀಕ್ಷೆಗಳನ್ನು ಮಾಡಲಾಗುತಿತ್ತು. ಅದು ಈಗ ವಾರಕ್ಕೆ ಸುಮಾರು 1.3 ಕೋಟಿಗೆ ಹೆಚ್ಚಳವಾಗಿದೆ ಎಂದು ಪಿಎಂಒ ಕಚೇರಿ ತಿಳಿಸಿದೆ.

ಪಾಸಿಟಿವಿಟಿ ದರ ಕ್ರಮೇಣ ಕಡಿಮೆಯಾಗುತ್ತಿದ್ದು, ಚೇತರಿಕೆ ದರ ಹೆಚ್ಚುತ್ತಿರುವ ಬಗ್ಗೆ ಮೋದಿ ವಿವರಿಸಿದ್ದಾರೆ. ಹಿಂದೆ ಪ್ರತಿದಿನ ಸುಮಾರು 4 ಲಕ್ಷ ಪ್ರಕರಣಗಳು ಕಂಡುಬರುತಿತ್ತು. ಆದರೆ, ಇದೀಗ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಆರೋಗ್ಯ ಕಾರ್ಯಕರ್ತರ ಪ್ರಯತ್ನದಿಂದಾಗಿ ಕೇಸ್ ಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ರಾಜ್ಯಗಳು ಹಾಗೂ ಜಿಲ್ಲೆಗಳಲ್ಲಿ ಕೋವಿಡ್-19 ಪರೀಕ್ಷೆ, ಆಕ್ಸಿಜನ್ ಲಭ್ಯತೆ ಮತ್ತು ಆರೋಗ್ಯ ಮೂಲಸೌಕರ್ಯ, ಲಸಿಕೆ ಅಭಿಯಾನ ಕುರಿತಂತೆ ಅಧಿಕಾರಿಗಳು ಸಮಗ್ರ ವಿವರವನ್ನು ಒದಗಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss