ಪ್ರಕಾಶ್ ಸಿಂಗ್ ಬಾದಲ್‌ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಪ್ರಧಾನಿ ಮೋದಿ ಅಂತಿಮ ನಮನ ಸಲ್ಲಿಸಿದ್ದಾರೆ.

ಪ್ರಕಾಶ್ ಸಿಂಗ್ ಬಾದಲ್ ಅವರ ನಿಧನ ನನಗೆ ವೈಯಕ್ತಿಕವಾಗಿ ತುಂಬಲಾರದ ನಷ್ಟವಾಗಿದೆ. ಹಲವು ವರ್ಷಗಳಿಂದ ಅವರೊಂದಿಗೆ ಸಂವಹನ ನಡೆಸಿದ್ದೇನೆ, ಅವರಿಂದ ಸಾಕಷ್ಟು ವಿಷಯಗಳನ್ನು ಕಲಿತಿದ್ದೇನೆ. ಅವರ ಬುದ್ಧಿವಂತಿಕೆ, ದೇಶಕ್ಕೆ ಅವರ ಕೊಡುಗೆ, ದಣಿವರಿಯದೆ ದುಡಿದ ಅವರನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ.

ಹಿರಿಯ ರಾಜಕಾರಣಿ ಬಾದಲ್ ಅವರಿಗೆ ಗೌರವಪೂರ್ವಕವಾಗಿ ನಮಿಸಲು ಎರಡು ದಿನ ಶೋಕಾಚರಣೆ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!