ಡಾ. ಶಿವಕುಮಾರ ಸ್ವಾಮೀಜಿಯವರ ಹುಟ್ಟು ಹಬ್ಬಕ್ಕೆ ಪ್ರಧಾನಿ ನಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜನ್ಮ ದಿನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ನಮನ ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿಯವರ ಟ್ವಿಟ್ಟರ್‌ ನಲ್ಲಿ ಶಿವಕುಮಾರ ಸ್ವಾಮೀಜಿಯವರ ಜನ್ಮ ದಿನಕ್ಕೆ ನಮನ ಸಲ್ಲಿಸಿದ್ದು, ತುಮಕೂರು ಭೇಟಿ ವೇಳೆಯ ಭಾಷಣದ ತುಣಕೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಸಿದ್ದಗಂಗಾ ಶ್ರೀಗಳು ಗುಜರಾತ್​ನ ನರೇಂದ್ರ ಮೋದಿಯವರ ಮನೆಗೆ ಭೇಟಿ ನೀಡಿ ತುಮಕೂರಿಗೆ ಬನ್ನಿ ಎಂದು ಆಹ್ವಾನ ನೀಡಿರುವುದನ್ನು ಉಲ್ಲೇಖಿಸಿದ್ದಾರೆ. ಆಗ ಪ್ರಧಾನಿ ಮೋದಿ ಗುಜರಾತ್​ ಮುಖ್ಯಮಂತ್ರಿಯಾಗಿದ್ದರು. “ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟು ಹಬ್ಬದ ಈ ವಿಶೇಷ ಸಂದರ್ಭದಲ್ಲಿ ಅವರಿಗೆ ನನ್ನ ನಮನ. ಅವರು ಲಕ್ಷಾಂತರ ಜನರ ಮೇಲೆ ಅಪಾರ ಪ್ರಭಾವ ಬೀರಿದ್ದಾರೆ. ಸಮಾಜಸೇವೆಗೆ ಉನ್ನತ ಸ್ಥಾನ ಮತ್ತು ಜನರನ್ನು ಸಶಕ್ತಗೊಳಿಸುವುದಕ್ಕೆ ಅವರು ಪ್ರಾಮುಖ್ಯ ನೀಡಿದ್ದರು. ಅವರ ಕನಸುಗಳನ್ನು ಪೂರೈಸಲು ನಾವು ಸದಾ ಶ್ರಮಿಸುತ್ತೇವೆ.” ಎಂದು ಟ್ವೀಟ್‌ ಮಾಡಿದ್ದಾರೆ.

ಸಿದ್ದಗಂಗಾ ಮಠದಲ್ಲಿ ಇಂದು ಬೆಳಗ್ಗೆಯಿಂದಲೇ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆಗಳು ನಡೆಯುತ್ತಿವೆ. ೧೧ ಗಂಟೆಗೆ ವೇದಿಕೆ ಕಾರ್ಯಕ್ರಮವಿದ್ದು, ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಂಜೆ
ಗಾನೋತ್ಸವ ಕಾರ್ಯಕ್ರಮವನ್ನ ಕೂಡ ಹಮ್ಮಿಕೊಳ್ಳಲಾಗಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!