ದೇಶ ವಿಭಜನೆ ಸಮಯದಲ್ಲಿ ಪ್ರಾಣ ಕಳೆದುಕೊಂಡ ಭಾರತೀಯರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಭಜನೆಯ ಸಂಸ್ಮರಣಾ ದಿನದಂದು ಪ್ರಧಾನಿ ಮೋದಿ ವಿಭಜನೆಯ ಸಮಯದಲ್ಲಿ ಪ್ರಾಣ ಕಳೆದುಕೊಂಡವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ವಿಭಜನೆಯ ಕರಾಳ ನೆನಪಿನ ದಿನವಾದ ಇಂದು ಆ ಅವಧಿಯಲ್ಲಿ ಪ್ರಾಣತೆತ್ತವರಿಗೆ ಶ್ರದ್ಧಾಂಜಲಿ ಕೋರಿದ್ದಾರೆ.

ದೇಶ ವಿಭಜನೆಯಲ್ಲಿ ಪ್ರಾಣತ್ಯಾಗ ಮಾಡಿದ ಭಾರತೀಯರನ್ನು ಪೂಜ್ಯಭಾವದಿಂದ ಸ್ಮರಿಸುವ ದಿನವೇ ವಿಭಜನೆಯ ಸಂಸ್ಮರಣ ದಿನವಾಗಿದೆ. ಈ ದಿನದಂದು ಸ್ಥಳಾಂತರದ ಭಾರವನ್ನು ಹೊರಲು ಒತ್ತಾಯಿಸಲ್ಪಟ್ಟವರ ನೋವು ಹಾಗೂ ಹೋರಾಟವನ್ನು ನೆನೆಯಬೇಕು. ಎಲ್ಲರಿಗೂ ನಮಸ್ಕರಿಸುತ್ತೇನೆ ಎಂದಿದ್ದಾರೆ.

1947ರಲ್ಲಿ ಬ್ರಿಟಿಷ್ ಭಾರತವನ್ನು ಭಾರತ ಹಾಗೂ ಪಾಕಿಸ್ತಾನ ಎನ್ನುವ ಪ್ರತ್ಯೇಕ ರಾಷ್ಟ್ರಗಳಾಗಿ ವಿಭಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಸಾವಿರಾರು ಜನರು ಪ್ರಾಣತ್ಯಾಗಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!