Vijay diwas | ಸೈನಿಕರ ಸಮರ್ಪಣಾ ಮನೋಭಾವಕ್ಕೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಾಂಗ್ಲಾದೇಶದ ವಿಮೋಚನೆಗೆ ಕಾರಣವಾದ 1971 ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯವನ್ನು ಸಾಧಿಸಿದ ನೆನಪಿಗಾಗಿ ವಿಜಯ್ ದಿವಸವನ್ನು ಆಚರಿಸಲಾಗುತ್ತದೆ.

ಸೈನಿಕರ ನಿಸ್ವಾರ್ಥ ಸೇವೆ, ಸಮರ್ಪಣಾ ಮನೋಭಾವಕ್ಕೆ ಪ್ರಧಾನಿ ಮೋದಿ ಗೌರವ ಸಲ್ಲಿಸಿದ್ದಾರೆ. ಪ್ರತಿ ವರ್ಷ ಡಿಸೆಂಬರ್ 16 ರಂದು ದೇಶವು ಸೈನಿಕರ ತ್ಯಾಗವನ್ನು ಗೌರವಿಸುವ ದಿನವನ್ನು ಆಚರಿಸಲಾಗುತ್ತದೆ. ಇಂದು, ವಿಜಯ್ ದಿವಸ್‌ನಲ್ಲಿ, 1971 ರಲ್ಲಿ ಭಾರತದ ಐತಿಹಾಸಿಕ ವಿಜಯಕ್ಕೆ ಕಾರಣರಾದ ವೀರ ಸೈನಿಕರ ಧೈರ್ಯ ಮತ್ತು ತ್ಯಾಗವನ್ನು ನಾವು ಗೌರವಿಸುತ್ತೇವೆ, ಅವರ ನಿಸ್ವಾರ್ಥ ಸಮರ್ಪಣೆ ಮತ್ತು ಅಚಲ ಸಂಕಲ್ಪ ನಮ್ಮ ದೇಶವನ್ನು ರಕ್ಷಿಸಿದೆ. ಮತ್ತು ನಮಗೆ ಕೀರ್ತಿ ತಂದಿದ್ದಾರೆ ಎಂದು ಬರೆದಿದ್ದಾರೆ.

ಈ ದಿನ ಅವರ ಅಸಾಧಾರಣ ಶೌರ್ಯ ಮತ್ತು ಅವರ ಅಚಲ ಮನೋಭಾವಕ್ಕೆ ಗೌರವವಾಗಿದೆ. ಅವರ ತ್ಯಾಗ ಯುವ ಪೀಳಿಗೆಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತವೆ ಮತ್ತು ನಮ್ಮ ರಾಷ್ಟ್ರದ ಇತಿಹಾಸದಲ್ಲಿ ಆಳವಾಗಿ ಹುದುಗಿದೆ ಎಂದು ಮೋದಿ ಹೇಳಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ 1971 ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ವಿಜಯ ಸಾಧಿಸಿದ ವೀರ ಹೃದಯಿಗಳಿಗೆ ನಮನ ಸಲ್ಲಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!