ಕಾರ್ಗಿಲ್ ವಿಜಯ ದಿವಸ: ವೀರ ಯೋಧರಿಗೆ ಪ್ರಧಾನಿ ಮೋದಿ ಗೌರವ ನಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ಕಾರ್ಗಿಲ್ ವಿಜಯ ದಿವಸ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರ ಯೋಧರ ತ್ಯಾಗ ಬಲಿದಾನವನ್ನು ಸ್ಮರಿಸಿ, ಗೌರವ ನಮನ ಸಲ್ಲಿಸಿದ್ದಾರೆ.

ಈ ಕುರಿತು ಇಂದು ಬೆಳಗ್ಗೆ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ‘ಕಾರ್ಗಿಲ್ ವಿಜಯ್ ದಿವಸವು ಭಾರತದ ಅದ್ಭುತ ಧೈರ್ಯಶಾಲಿಗಳ ವೀರಗಾಥೆಯನ್ನು ಮುನ್ನೆಲೆಗೆ ತರುತ್ತದೆ. ಯುದ್ಧದಲ್ಲಿ ಹೋರಾಡಿದ ಪ್ರತಿಯೊಬ್ಬರು ಯಾವಾಗಲೂ ಈ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತಾರೆ. ಈ ವಿಶೇಷ ದಿನದಂದು, ನನ್ನ ಹೃದಯದ ಅಂತರಾಳದಿಂದ ವೀರ ಯೋಧರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಭಾರತಕ್ಕೆ ಜಯವಾಗಲಿ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

1999ರ ಕಾರ್ಗಿಲ್‌ ಯುದ್ಧದಲ್ಲಿ ವೀರಮರಣ ಹೊಂದಿದ ಸೈನಿಕರ ತ್ಯಾಗ, ಬಲಿದಾನವನ್ನು ಸ್ಮರಿಸಲು ಪ್ರತಿ ವರ್ಷ ಜುಲೈ 26ರಂದು ಕಾರ್ಗಿಲ್‌ ವಿಜಯ ದಿವಸ ಎಂದು ಆಚರಣೆ ಮಾಡಲಾಗುತ್ತದೆ. ಈ ಮೂಲಕ ವೀರ ಯೋಧರ ತ್ಯಾಗ ಬಲಿದಾನಗಳನ್ನು ಸ್ಮರಿಸಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!