ಅಪ್ಪು ಗಂಧದ ಗುಡಿ ಟ್ರೇಲರ್‌ಗೆ ಮೋದಿ ಮೆಚ್ಚುಗೆ: ಟ್ವೀಟ್‌ ಮೂಲಕ ಹಾರೈಸಿದ ಪ್ರಧಾನಿ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕ ರತ್ನ ದಿವಂಗತ ಪುನೀತ್ ರಾಜ್ ಕುಮಾರ್ ಕೊನೆಯದಾಗಿ ಕಾಣಿಸಿಕೊಂಡ ಬಹುನಿರೀಕ್ಷಿತ ʻಗಂಧದ ಗುಡಿʼ ಟ್ರೈಲರ್ ಇಂದು ಅಭಿಮಾನಿಗಳ ಸಮ್ಮುಖದಲ್ಲಿ ನರ್ತಕಿ ಥಿಯೇಟರ್‌ನಲ್ಲಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಟ್ರೇಲರ್‌ ಬಿಡುಗಡೆ ಮಾಡಿದ್ದಾರೆ. ಗಂಧದ ಗುಡಿ ಟ್ರೇಲರ್‌ ವೀಕ್ಷಿಸಿದ ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ʻಅಪ್ಪು ಪ್ರಪಂಚದಾದ್ಯಂತ ಕೋಟ್ಯಾಂತರ ಜನರ ಹೃದಯದಲ್ಲಿ ವಾಸಿಸುತ್ತಿದ್ದಾರೆ. ತೇಜಸ್ಸು, ಶಕ್ತಿ, ಅಪ್ರತಿಮ ಪ್ರತಿಭೆಯುಳ್ಳ ವ್ಯಕ್ತಿ ಪುನೀತ್‌ ರಾಜ್‌ಕುಮಾರ್.‌ ಗಂಧದಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರ ಸಂರಕ್ಷಣೆಗೆ ಸಂದ ಗೌರವವಾಗಿದೆ. ಈ ಪ್ರಯತ್ನಕ್ಕೆ ನನ್ನ ಶುಭಾಶಯಗಳುʼ ಎಂದು ಪ್ರಧಾನಿಯವರು ಟ್ವೀಟ್‌ ಮಾಡಿದ್ದಾರೆ.

ಟ್ರೇಲರ್‌ ಬಿಡುಗಡೆ ಮಾಡುತ್ತಿರುವ ಬಗ್ಗೆ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ ಅವರು ಟ್ವಿಟ್ಟರ್‌ನಲ್ಲಿ ಪ್ರಧಾನಿ ಮೋದಿಯವರೊಂದಿಗೆ ಹಂಚಿಕೊಂಡಿರು. ಅಪ್ಪು ಕನಸಿನ ಸಾಕ್ಷ್ಯಾಚಿತ್ರವಾಗಿದ್ದ ಗಂಧದ ಗುಡಿಯ ಟ್ರೇಲರ್‌ ಅಂತೂ ಇಂದು ರಿಲೀಸ್‌ ಆಗಿದೆ. ಇದೇ ತಿಂಗಳ 28ಕ್ಕೆ ಎಲ್ಲಾ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!