ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರುನಾಡಿನಲ್ಲಿ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಸಂಭ್ರಮಕ್ಕೆ ಮತ್ತಷ್ಟು ಸ್ಪೂರ್ತಿ ತುಂಬಿದ ಪ್ರಧಾನಿ ಮೋದಿ ನಾಡಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಶುಭಾಶಯಗಳನ್ನ ತಿಳಿಸಿದ್ದಾರೆ.
ಕನ್ನಡದಲ್ಲೇ ಟ್ವೀಟ್ ಮಾಡಿದ ಶುಭಕೋರಿದ ಪ್ರಧಾನಿ.. ʻಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿʼ. ಎಂದು ಶುಭ ಹಾರೈಸಿದರು.