Friday, June 2, 2023

Latest Posts

ಚಿತ್ತಾಪುರದಲ್ಲಿ ಪ್ರಧಾನಿ ಮೋದಿ ರ‍್ಯಾಲಿ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ತಾಪುರದಲ್ಲಿ ಇಂದು ನಡೆಯಬೇಕಿದ್ದ ಪ್ರಧಾನಿ ಮೋದಿ ಪ್ರಚಾರ ರದ್ದಾಗಿದೆ ಎಂದು ತಿಳಿದುಬಂದಿದೆ. ಕಲಬುರಗಿ ಬಳಿಯ ಚಿತ್ತಾಪುರದಲ್ಲಿ ಇಂದು ಪ್ರಧಾನಿ ಮೋದಿ ಭಾಗವಹಿಸಬೇಕಿದ್ದ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಲಾಗಿದೆ.

ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ವಿರುದ್ಧ ಹಲವಾರು ಅಪರಾಧಪ್ರಕರಣಗಳಿವೆ, ಈ ರೀತಿ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂದು ಬೇರೆ ಪಕ್ಷಗಳು ಲೇವಡಿ ಮಾಡಿವೆ. ಈ ಬೆನ್ನಲ್ಲೇ ರಾಠೋಡ್ ವಿರುದ್ಧ ಕಳ್ಳತನದ ಪ್ರಕರಣವೊಂದು ಸಾಬೀತಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರೋಡ್ ಶೋ ರದ್ದಾಗಿದೆ ಎನ್ನಲಾಗಿದೆ. ಅಂಗನವಾಡಿ ಮಕ್ಕಳ ಹಾಲಿನ ಪೌಡರ್ ಕಳುವು ಮಾಡಿದ ಆರೋಪ ಸಾಬೀತಾಗಿದ್ದು, ಮಣಿಕಂಠ ಪರ ಪ್ರಧಾನಿ ಮೋದಿ ಪ್ರಚಾರ ನಡೆಯುವುದಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!