ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ವೀರ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಹಬ್ಬವನ್ನಾಚರಿಸಲಿದ್ದಾರೆ. ಅದಕ್ಕಾಗಿ ಈಗಾಗಲೇ ಹಿಮಾಚಲ ಪ್ರದೇಶದ ಲೆಪ್ಚಾ ತಲುಪಿರುವುದಾಗಿ ಟ್ವೀಟ್ ಮಾಡಿದ್ದಾರೆ.
“ನಮ್ಮ ವೀರ ಭದ್ರತಾ ಪಡೆಗಳೊಂದಿಗೆ ದೀಪಾವಳಿ ಆಚರಿಸಲು ಹಿಮಾಚಲ ಪ್ರದೇಶದ ಲೆಪ್ಚಾ ತಲುಪಿದ್ದೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಪ್ರತಿ ವರ್ಷ ಗಡಿ ನಿಯಂತ್ರಣ ರೇಖೆ, ಅಂತಾರಾಷ್ಟ್ರೀಯ ಗಡಿ ಅಥವಾ ವಾಸ್ತವಿಕ ನಿಯಂತ್ರಣ ರೇಖೆಯ ಸೈನಿಕರ ನಡುವೆ ದೀಪಾವಳಿಯನ್ನು ಆಚರಿಸುವ ಪ್ರಧಾನಿ ಮೋದಿ ಈ ವರ್ಷವೂ ಸೈನಿಕರೊಂದಿಗೆ ಹಬ್ಬ ಆಚರಿಸಲಿದ್ದಾರೆ. ಸೈನಿಕರೊಂದಿಗೆ ಸಿಹಿತಿಂಡಿ ಸೇವಿಸಿದ ನಂತರ ಮಿಲಿಟರಿ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ.