Friday, August 29, 2025

India-Japan Annual Summit 2025: ಟೋಕಿಯೋ ತಲುಪಿದ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಎರಡು ದಿನಗಳ ಭೇಟಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಪಾನ್’ಗೆ ಭೇಟಿ ನೀಡಿದ್ದು, ಈ ವೇಳೆ ಮೋದಿಯವರಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಗಿದೆ.

ಮೋದಿಯವರು ಜಪಾನ್’ಗೆ ಭೇಟಿ ನೀಡಿರುವ ಕುರಿತು ವಿದೇಶಾಂಗ ಸಚಿವಾಲಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

ಭಾರತ-ಜಪಾನ್ ಪಾಲುದಾರಿಕೆಯನ್ನು ಮುನ್ನಡೆಸಲು ಪ್ರಧಾನಿ ಮೋದಿಯವರು ಇಂದು ಸಂಜೆ ಜಪಾನ್ ಪ್ರಧಾನಿ ಶಿಗೇರು ಇಶಿಬಾ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರ ಈ ಭೇಟಿ ಎರಡೂ ದೇಶಗಳ ನಡುವಿನ ನಾಗರೀಕರು ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸಲು ಒಂದು ಅವಕಾಶವಾಗಿದೆ ಎಂದು ಹೇಳಿದೆ.

ಆಗಸ್ಟ್ 29 ರಿಂದ 30 ರವರೆಗೆ ಮೋದಿಯವರು ಜಪಾನ್ ರಾಷ್ಟ್ರದಲ್ಲಿ ತಂಗಲಿದ್ದು, ಈ ಸಮಯದಲ್ಲಿ ಜಪಾನ್ ಪ್ರಧಾನಿ ಇಶಿಬಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ