ಪ್ರಧಾನಿ ಮೋದಿಗೆ ಬಂತು ಬೆದರಿಕೆ ಪತ್ರ: ಕೇರಳ ವ್ಯಕ್ತಿಯ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೊಚ್ಚಿಗೆ ನಾಳೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಕ್ಸೇವಿಯರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಈ ಕುರಿತು ಎಎನ್ಐ ಜೊತೆ ಮಾತನಾಡಿದ ಕೊಚ್ಚಿ ನಗರ ಪೊಲೀಸ್ ಕಮಿಷನರ್ ಕೆ.ಸೇತು ರಾಮನ್, ಪ್ರಧಾನಿಗೆ ಬೆದರಿಕೆ ಪತ್ರ ಕಳುಹಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಕ್ಸೇವಿಯರ್ ಬಂಧಿತ ಆರೋಪಿಯಾಗಿದ್ದು, ವೈಯಕ್ತಿಕ ದ್ವೇಷದ ಕಾರಣ ಈ ರೀತಿ ಪತ್ರ ಬರೆದಿದ್ದ ಎಂದಿದ್ದಾರೆ. ಪ್ರಧಾನಿ ಮೋದಿ ಕೊಚ್ಚಿ ಆಗಮನ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇದಕ್ಕಾಗಿ 2,060 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅವರು ಆಯುಕ್ತರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!