September 25, 2026
Friday, September 25, 2026
spot_img

22 ಲಕ್ಷ ಮಕ್ಕಳ ಭವಿಷ್ಯ ಅಪಾಯದಲ್ಲಿದ್ದರೂ ಪ್ರಧಾನಿ ಮೋದಿ ಮೌನ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಟೀಕಿಸಿದ್ದಾರೆ.

ನಾವು ವಿರಮಿಸುವ ಪ್ರಶ್ನೆಯೇ ಇಲ್ಲ

ಈ ಕುರಿತು ಪೋಸ್ಟ್ ಮಾಡಿರುವ ಅವರು, ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ 22 ಲಕ್ಷ ಮಕ್ಕಳ ಭವಿಷ್ಯ ಅಪಾಯದಲ್ಲಿದೆ. ಯುವಕರ ಜೀವನ ಬೀದಿಗೆ ಬಂದಿದೆ. ಆದರೆ ಎಷ್ಟೆಲ್ಲಾ ಆದರೂ ಪ್ರಧಾನಿ ಮೌನವಾಗಿದ್ದಾರೆ. ಇಲ್ಲಿ ಸರ್ಕಾರ ಪ್ರತಿಕ್ರಿಯೆ ನೀಡುವ ಬದಲು ತಪ್ಪಿಸಿಕೊಳ್ಳುತ್ತಿದೆ. ಆದರೆ ನಾವು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಮತ್ತು ನೀಟ್‌ನಂತಹ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯಲು ಒಂದು ಸೂಕ್ತ ವ್ಯವಸ್ಥೆ ಆಗುವ ವರೆಗೆ ವಿರಮಿಸುವುದಿಲ್ಲ ಎಂದು ಗುಡುಗಿದ್ದಾರೆ.

ಮೇ 3 ರಂದು ನಡೆಸಲಾಗಿದ್ದ ನೀಟ್ ಯುಜಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿದ್ದು, ಈ ಹಿನ್ನೆಲೆಮೇ 12 ರಂದು ಪರೀಕ್ಷೆಯನ್ನು ರದ್ದುಗೊಳಿಸಲಾಯಿತು.ಇದರ ಬಳಿಕ ಕೇಂದ್ರ ಸರಕಾರದ ವಿರುದ್ಧ ವಿಪಕ್ಷಗಳು ನಿರಂತರ ಪ್ರತಿಭಟನೆಗಳು ನಡೆಸುತ್ತಿದೆ.

Must Read