September 15, 2026
Tuesday, September 15, 2026
spot_img

ಕರುನಾಡಿಗೆ ಪ್ರಧಾನಿ ಮೋದಿ ರೀ-ಎಂಟ್ರಿ: ಸಾಂಸ್ಕೃತಿಕ ನಗರಿಯಲ್ಲಿ ‘ನಮೋ’ ಅಬ್ಬರ ಗ್ಯಾರಂಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಂಸ್ಕೃತಿಕ ನಗರಿ ಮೈಸೂರಿಗೆ ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಆಗಮಿಸುತ್ತಿದ್ದಾರೆ. ಈ ಕುರಿತು ಪ್ರಧಾನಿಗಳ ಪ್ರವಾಸದ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿದ್ದು, ಮುಂಬರುವ ಆಗಸ್ಟ್ 1 ರಂದು ಅವರು ಅರಮನೆ ನಗರಿಗೆ ಭೇಟಿ ನೀಡಲಿದ್ದಾರೆ. ಪ್ರಧಾನಿಗಳ ಈ ಬಾರಿಯ ಭೇಟಿಯು ಸಾಂಸ್ಕೃತಿಕ ಹಾಗೂ ಧಾರ್ಮಿಕ ಮಹತ್ವ ಪಡೆದುಕೊಂಡಿದೆ.

ಶ್ರೀ ರಾಮಕೃಷ್ಣ ಆಶ್ರಮದ ಕಾರ್ಯಕ್ರಮದಲ್ಲಿ ಭಾಗಿ

ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ನಗರದ ಪ್ರಸಿದ್ಧ ಶ್ರೀ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ. ಆಶ್ರಮದ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಿವಿಧ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಅವರು ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಆಶ್ರಮದ ಹಲವು ಜನಪರ ಯೋಜನೆಗಳಿಗೆ ಚಾಲನೆ ನೀಡುವ ಸಾಧ್ಯತೆಯೂ ಇದೆ.

ಸಕಲ ಸಿದ್ಧತೆ ಮತ್ತು ಬಿಗಿ ಭದ್ರತೆ

ವಿಶ್ವವಿಖ್ಯಾತ ಮೈಸೂರಿಗೆ ಪ್ರಧಾನಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಸ್ಥಳೀಯ ಆಡಳಿತ ಮತ್ತು ಪೊಲೀಸ್ ಇಲಾಖೆ ಭರದ ಸಿದ್ಧತೆಗಳನ್ನು ಕೈಗೊಂಡಿದೆ. ರಾಮಕೃಷ್ಣ ಆಶ್ರಮದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುತ್ತಿದ್ದು, ಪ್ರಧಾನಿಗಳ ಭೇಟಿಯನ್ನು ಅತ್ಯಂತ ಯಶಸ್ವಿಗೊಳಿಸಲು ವಿವಿಐಪಿ (VVIP) ಭದ್ರತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !