ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ( Narendra modi) ಹಾಗೂ ಯುಎಇ (UAE) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ (Sheikh Mohamed bin Zayed Al Nahyan) ಅವರು ಅಹಮದಾಬಾದ್‌ನಲ್ಲಿ ರೋಡ್ ಶೋ ನಡೆಸುವ ಸಾಧ್ಯತೆ ಇದೆ.
ಜನವರಿ 9 ರಂದು ಯುಎಇ ಅಧ್ಯಕ್ಷರು ಅಹಮದಾಬಾದ್‌ಗೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಅವರನ್ನು ಬರಮಾಡಿಕೊಳ್ಳಲಿದ್ದು, ಏರ್‌ಪೋರ್ಟ್‌ನಿಂದ ಸಬರಮತಿ ಆಶ್ರಮದವರೆಗೆ ರೋಡ್ ಶೋ ನಡೆಸಲಿದ್ದಾರೆ.
ಜನವರಿ 10-12ರವರೆಗೆ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆ( Vibrant Gujrat Global Summit) ನಡೆಯಲಿದೆ. ಈ ಸಭೆಯಲ್ಲಿ ಪಾಲ್ಗೊಳ್ಳಲು ಯುಎಇ ಅಧ್ಯಕ್ಷರು ಆಗಮಿಸಲಿದ್ದು, ಜ.9ರಂದು 20 ನಿಮಿಷಗಳ ರೋಡ್ ಶೋ ನಡೆಸಲಾಗುತ್ತದೆ.