ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶಕ್ಕೆ ಇಂದು ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ವಿಶಾಖಪಟ್ಟಣದಲ್ಲಿ ಮೆಗಾ ರೋಡ್ ಶೋ ನಡೆಸಿದರು.
ವಿಶಾಖಪಟ್ಟಣದ ಸಂಪತ್ ವಿನಾಯಕ ದೇವಸ್ಥಾನದಿಂದ ಆಂಧ್ರ ವಿಶ್ವವಿದ್ಯಾಲಯ ಎಂಜಿನಿಯರಿಂಗ್ ಕಾಲೇಜು ಮೈದಾನದವರೆಗೆ ನಡೆದ ರೋಡ್ಶೋನಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ವೇಳೆ ಅವರಿಗೆ ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಕೂಡ ಸಾಥ್ ನೀಡಿದರು.
ಆಂಧ್ರಪ್ರದೇಶಕ್ಕೆ ಪ್ರಧಾನಿಯನ್ನು ಸ್ವಾಗತಿಸಿದ ಸಿಎಂ ಚಂದ್ರಬಾಬು, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಹಿರಿಯ ಅಧಿಕಾರಿಗಳು ವೈಜಾಗ್ ವಿಮಾನ ನಿಲ್ದಾಣದಲ್ಲಿ ಅವರನ್ನು ಬರಮಾಡಿಕೊಂಡರು.