Thursday, March 23, 2023

Latest Posts

ಇಂದು ಕುಂದಾನಗರಿ, ಕುವೆಂಪು ನಾಡಿನಲ್ಲಿ ಮೋದಿ ಕಮಾಲ್:‌ ಹಲವು ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಮತ್ತೊಮ್ಮೆ ಭೇಟಿ ನೀಡಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇಂದು (ಫೆ.27)ಕ್ಕೆ ಕುಂದಾನಗರಿಗೆ ಭೇಟಿ ನೀಡಲಿರುವ ಪ್ರಧಾನಿ ರೊಡ್‌ ಶೋ ನಡೆಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆ ಇಂದು ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಅನುದಾನಿತ, ಅನುದಾನ ರಹಿತ ಎಲ್ಲಾ ಕಾಲೇಜುಗಳ ಪರೀಕ್ಷೆ ಮುಂದೂಡುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಇಂದು ನಡೆಯಬೇಕಿದ್ದ ಪರೀಕ್ಷೆಯನ್ನ ಮಾರ್ಚ್ 6ರಂದು ನಡೆಸಲು ಆದೇಶಿಸಲಾಗಿದೆ. ಇನ್ನೂ ನಗರದಲ್ಲಿ ರೋಡ್‌ ಶೋ ಇರುವುದರಿಂದ ಮಾರ್ಗ ಬದಲಾವಣೆ ಹಾಗೆಯೇ ಬಸ್ ಸಂಚಾರ ವ್ಯತ್ಯಯವಾಗಲಿದೆ. ಆದ ಕಾರಣ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗಬಾರದೆಂಬ ಕಾರಣಕ್ಕೆ ಪರೀಕ್ಷೆಯನ್ನು ಮುಂದೂಡಲಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ

ನಾಳೆ ಮಲೆನಾಡಿಗರು ಕನಸು ನನಸಾಗಲಿದೆ.ಇದರ ಜೊತೆಗೆ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಲಿದೆ. ಬೆಳಗ್ಗೆ 11:15ಕ್ಕೆ ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದಿಳಿಯಲಿದ್ದಾರೆ. ಬಳಿಕ 11:30ಕ್ಕೆ ವಿಮಾನ ನಿಲ್ದಾಣವನ್ನು ಪ್ರಧಾನಿ​​ ಲೋಕಾರ್ಪಣೆ ಮಾಡಲಿದ್ದಾರೆ. ಈ ಶುಭ ಸಂದರ್ಭದಲ್ಲಿ ಇಂದೇ ಯಡಿಯೂರಪ್ಪನವರ ಜನ್ಮದಿನವೂ ಆದ್ದರಿಂದ ಶುಭಾಶಯ ಕೋರಲಿದ್ದಾರೆ. ಅಂತೆಯೇ ಕೇಂದ್ರ-ರಾಜ್ಯದ ಹೊಸ ಯೋಜನಾ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಬಳಿಕ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಬೆಳಗಾವಿಯಲ್ಲಿ ರೋಡ್‌ ಶೋ

ವಿಮಾನ ನಿಲ್ದಾಣ ಉದ್ಘಾಟನೆ ಬಳಿಕ ಪ್ರಧಾನಿ ಕುಂದಾನಗರಿಯಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಮಧ್ಯಾಹ್ನ 2.45ಕ್ಕೆ ಶಿವಮೊಗ್ಗದಿಂದ ವಿಶೇಷ ವಿಮಾನದಲ್ಲಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ನಗರದ ಕೆಎಸ್‌ಆರ್‌ಪಿ ಮೈದಾನಕ್ಕೆ ಬರಲಿದ್ದಾರೆ. ಚನ್ನಮ್ಮ ವೃತ್ತದಿಂದ 10 ಕಿಮೀ ರೋಡ್ ಶೋ ನಡೆಸಲಿದ್ದಾರೆ. ಕಾಲೇಜು ಮಾರ್ಗವಾಗಿ ಸಂಭಾಜಿ ವೃತ್ತ, ಕಿರ್ಲೋಸ್ಕರ್ ರಸ್ತೆ, ಕಪಿಲೇಶ್ವರ ದೇವಸ್ಥಾನ ರಸ್ತೆ, ಶಿವಾಜಿ ಗಾರ್ಡನ್, ಓಲ್ಡ್ ಪಿಬಿ ರೋಡ್ ಮಾರ್ಗವಾಗಿ ಮಾಲಿನಿ ಸಿಟಿವರೆಗೂ ರೋಡ್ ಶೋ ಸಾಗಲಿದೆ. ರೋಡ್ ಶೋ ಬಳಿಕ ಮಾಲಿನಿ ಸಿಟಿಯಲ್ಲಿ ಆಯೋಜನೆ ಮಾಡಿರುವ ಕಾರ್ಯಕ್ರಮದಲ್ಲಿ ಮೋದಿ ಮಾತನಾಡಲಿದ್ದಾರೆ.

ಪ್ರಧಾನಿ ವಾಪಸಾಗುವವರೆಗೆ ಈ ರಸ್ತೆಗಳೆಲ್ಲಾ ಬಂದ್‌ ಆಗಲಿವೆ. ಬೆಳಗ್ಗೆ 8ರಿಂದ ಸಂಜೆ 8ರವರೆಗೂ ಈ ನಿಯಮ ಜಾರಿಯಲ್ಲಿರಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!