ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದೆಲ್ಲೆಡೆ ವಿರೋಧ ವ್ಯಕ್ತವಾಗಿದ್ದು, ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯ ಪ್ರವೇಶಿಸಬೇಕು ಎಂದು ಸಚಿವ ಬೋಸರಾಜು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ವಿಚಾರವಾಗಿ ರಾಜ್ಯದ ಸಂಸದರು ಮಾತಾಡಬೇಕು. ಪ್ರಧಾನಿಯವರು ಮಧ್ಯ ಪ್ರವೇಶಿಸದರೆ ಈ ಸಮಸ್ಯೆ ಬಗೆಹರಿಯಬಹುದು ಎಂಬ ಆಶಾವಾದವನ್ನು ವ್ಯಕ್ತಪಡಿಸಿದರು.