ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಪ್ರಧಾನಿ ಮೋದಿಯವರು ಈ ಬಾರಿ ರಾಜ್ಯದ ಜನಪದ ಕಲೆಯಾಗಿರುವ “ಹುಲಿ ವೇಷ ಕುಣಿತ” ಕುರಿತು ಮಾತನಾಡಿದ್ದಾರೆ.
ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಹುಲಿ ವೇಷ ತೊಟ್ಟು ಕುಣಿತದ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತದೆ. ಇದು ವಿಶೇಷ ಹಾಗೂ ಗಮನ ಸೆಳೆಯುವ ಕಾರ್ಯಕ್ರಮವಾಗಿದೆ.
ಅದೇ ರೀತಿ ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಬಿಆರ್ಟಿ ಅರಣ್ಯವಿದೆ. ಬಿಆರ್ಟಿ ಅರಣ್ಯ ಅತಿಹೆಚ್ಚು ಹುಲಿಗಳಿರುವ ಪ್ರದೇಶವಾಗಿದೆ. ಇಲ್ಲಿ ಹುಲಿಗಳನ್ನು ಉಳಿಸುವುದರಲ್ಲಿ ಸ್ಥಳೀಯ ಸೋಲಿಗರ ಪಾತ್ರ ದೊಡ್ಡದಿದೆ. ಹುಲಿಗಳನ್ನು ಉಳಿಸಿರುವ ಕ್ರೆಡಿಟ್ ಸ್ಥಳೀಯ ಸೋಲಿಗರಿಗೆ ಸಲ್ಲಬೇಕು. ಈಗಲೂ ಪ್ರಾಣಿ-ಮಾನವನ ಸಂಘರ್ಷ ನಡೆಯುತ್ತಲೇ ಇರುತ್ತದೆ. ಆದರೂ ಅದನ್ನು ಕಾಪಾಡಿಕೊಂಡು ಹೋಗಲಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಹಿಳಾ ದಿನಾಚರಣೆ ಗಿಫ್ಟ್
ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಯಶಸ್ವಿ ಮಹಿಳೆಯರಿಗೆ ಬಿಗ್ ಗಿಫ್ಟ್ ಕೊಟ್ಟಿದ್ದಾರೆ. ಮಾರ್ಚ್ 8 ರಂದು ವಿಶ್ವ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದ್ದು, ಹೀಗಾಗಿ ತಮ್ಮ ವಿವಿಧ ಸೋಷಿಯಲ್ ಮೀಡಿಯಾಗಳನ್ನು ಹ್ಯಾಂಡಲ್ ಮಾಡಲು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವನಿತೆಯರಿಗೆ ಬಿಟ್ಟುಕೊಡುವುದಾಗಿ ಹೇಳಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರು ತಮ್ಮ ಅನುಭವ ಹಾಗೂ ವಿಶೇಷ ಸಂದೇಶವನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಿಂದ ಜನರಿಗೆ ತಿಳಿಸಬಹುದು ಎಂದು ಮೋದಿ ಹೇಳಿದ್ದಾರೆ. ಈ ಮೂಲಕ ನಾವು ಮಹಿಳೆಯರ ಅದಮ್ಯ ಚೇತನವನ್ನು ಸಂಭ್ರಮಿಸೋಣ ಎಂದು ಹೇಳಿದ ಮೋದಿ, ಹೆಚ್ಚು ಹೆಚ್ಚು ಮಹಿಳೆಯರು ಇಲ್ಲಿ ಭಾಗಿಯಾಗುವಂತೆ ಕೇಳಿಕೊಂಡಿದ್ದಾರೆ.