ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಾತುಕತೆ ನಡೆಸಿದ್ದಾರೆ. ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಸಹಯೋಗದ ಅಗಾಧ ಸಾಮರ್ಥ್ಯದ ಬಗ್ಗೆ ಇಬ್ಬರೂ ಚರ್ಚಿಸಿದ್ದಾರೆ.
ಇಲಾನ್ ಮಸ್ಕ್ ಅವರ ಟೆಸ್ಲಾ ಕಾರುಗಳನ್ನು ಭಾರತದಲ್ಲಿ ಆಮದು ಮಾಡಲು ಎಲ್ಲಾ ಸಿದ್ಧತೆ ನಡೆದಿರುವ ಹೊತ್ತಿನಲ್ಲಿ ಈ ಮಾತುಕತೆ ನಡೆದಿರುವುದು ಕುತೂಹಲ ಮೂಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್ ಪೋಸ್ಟ್ವೊಂದರಲ್ಲಿ, ಮಸ್ಕ್ ಜೊತೆಗಿನ ದೂರವಾಣಿ ಮಾತುಕತೆ ವಿಚಾರ ಪ್ರಸ್ತಾಪಿಸಿದ್ದಾರೆ. ಎಲಾನ್ ಮಸ್ಕ್ ಅವರೊಂದಿಗೆ ಮಾತನಾಡಿದೆ. ಈ ಹಲವು ವಿಷಯಗಳ ಬಗ್ಗೆ ಮಾತನಾಡಿದೆವು. ಈ ವರ್ಷದ ಆರಂಭದಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ನಮ್ಮ ಭೇಟಿ ವೇಳೆ ಚರ್ಚಿಸಲಾಗಿದ್ದ ವಿಷಯಗಳೂ ಸೇರಿದಂತೆ ಹಲವು ವಿಚಾರಗಳು ಬಂದವು. ತಂತ್ರಜ್ಞಾನ ಮತ್ತು ಇನ್ನೋವೇಶನ್ ಕ್ಷೇತ್ರದಲ್ಲಿ ಹೊಂದಾಣಿಕೆ ಸಾಧ್ಯತೆಯನ್ನು ಚರ್ಚಿಸಿದೆವು. ಈ ಕ್ಷೇತ್ರದಲ್ಲಿ ಅಮೆರಿಕದ ಜೊತೆ ಸಹಭಾಗಿತ್ವವನ್ನು ಹೆಚ್ಚಿಸಲು ಭಾರತ ಬದ್ಧವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.