Sunday, December 3, 2023

Latest Posts

ತೆಲಂಗಾಣದತ್ತ ಮೋದಿ ಚಿತ್ತ: ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂಬರುವ ಚುನಾವಣೆಗೆ ಬಿಜೆಪಿ ಚಿತ್ತ ತೆಲಂಗಾಣದತ್ತ ಹರಿದಿದೆ. ಇಂದು (ಭಾನುವಾರ) ಪ್ರಧಾನಿ ಮೋದಿ ತೆಲಂಗಾಣಕ್ಕೆ ಭೇಟಿ ನೀಡಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ 13,545 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭಗಳು ನಡೆಯಲಿವೆ.

505 ಕೋಟಿರೂ. ವೆಚ್ಚದಲ್ಲಿ ನಿರ್ಮಿಸಿರುವ ಜಾಕ್ಲಾರ್-ಕೃಷ್ಣ ಹೊಸ ರೈಲು ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗುವುದು. ಈ ಹೊಸ ರೈಲು ಮಾರ್ಗದ ಮೂಲಕ ಹೈದರಾಬಾದ್ ಮತ್ತು ಗೋವಾ ನಡುವಿನ ಅಂತರವು 102 ಕಿ.ಮೀ ಕಡಿಮೆಯಾಗಲಿದೆ. ಕಾಚಿಗುಡ ಮತ್ತು ರಾಯಚೂರು ನಡುವೆ ಡೆಮೊ ರೈಲು ಆರಂಭವಾಗಲಿದೆ.

ಇನ್ನೊಂದೆಡೆ 6,6404 ಕೋಟಿ ರೂ.ಗಳ ರಾಷ್ಟ್ರೀಯ ಹೆದ್ದಾರಿಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 2,455 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಖಮ್ಮಂ-ಸೂರ್ಯಪೇಟ್ ಚತುಷ್ಪಥ ಹೆದ್ದಾರಿ ಉದ್ಘಾಟನೆಯಾಗಲಿದೆ. ಕರ್ನಾಟಕದಿಂದ ಚರ್ಲಪಲ್ಲಿವರೆಗೆ ರೂ.2,661 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಗ್ಯಾಸ್ ಪೈಪ್ ಲೈನ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗುವುದು.

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ 81 ಕೋಟಿರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಕಟ್ಟಡಗಳು ಉದ್ಘಾಟನೆಗೊಳ್ಳಲಿವೆ. ಪ್ರಧಾನಿ ಮೋದಿ ಮಧ್ಯಾಹ್ನ 1.30ಕ್ಕೆ ಶಂಶಾಬಾದ್ ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಮಹಬೂಬ್ ನಗರ ಹೆಲಿಪ್ಯಾಡ್‌ಗೆ ಆಗಮಿಸುವರು.

ಪ್ರಧಾನಿ ಮೋದಿ ಅವರು ಮಧ್ಯಾಹ್ನ 2.15 ರಿಂದ 45 ನಿಮಿಷಗಳ ಕಾಲ ಮಹೆಬೂಬ್ ನಗರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಉದ್ಘಾಟನಾ ಸಮಾರಂಭಗಳಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸಾರ್ವಜನಿಕ ಸಭೆ ನಡೆಯುವ ಸ್ಥಳಕ್ಕೆ ಆಗಮಿಸುವರು. ಸಂಜೆ 4 ಗಂಟೆಯವರೆಗೆ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಹೆಬೂಬ್ ನಗರದಿಂದ ಶಂಶಾಬಾದ್‌ಗೆ ತೆರಳಲಿದ್ದಾರೆ. ಬಳಿಕ ಪ್ರಧಾನಿ ಮೋದಿ ಸಂಜೆ 4.50ಕ್ಕೆ ಶಂಶಾಬಾದ್ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!