ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 29ರಂದು ರಾಷ್ಟ್ರೀಯ ಶಿಕ್ಷಣ ನೀತಿ 2020ರ ಕುರಿತು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ಬದಲಾವಣೆಗಳು ಆರಂಭವಾಗಿ ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನಲೆಯಲ್ಲಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಹ ಇರಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಮೋದನೆಗೆ ಒಪ್ಪಿಗೆ ನೀಡಲಾಗಿತ್ತು.
ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ಐದನೇ ತರಗತಿವರೆಗೆ ಮಕ್ಕಳಿಗೆ ಪ್ರಾದೇಶಿಕ ಭಾಷೆಯಲ್ಲೇ ಪಾಠ ಹೇಳುವುದರಿಂದ ಹಿಡಿದು, 10+2ರ ಶಾಲಾ ಮಾದರಿ ಬದಲಿಗೆ 5+3+3+4ರ ರಚನೆಯ ಶಾಲಾ ಕ್ರಮವನ್ನು ಪರಿಚಯಿಸುವವರೆಗೂ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಮಾರ್ಪಾಡು ಮಾಡಲಾಗಿತ್ತು.