ಹೊಸದಿಗಂತ ವರದಿ, ಮಂಗಳೂರು:
ಪ್ರಭು ಶ್ರೀರಾಮನ ಜನ್ಮಭೂಮಿ ಅಯೋಧ್ಯೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.
ಇಂದು ಅವರು ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಹೊಸ ವಿಮಾನ ನಿಲ್ದಾಣ, ಅಭಿವೃದ್ಧಿಗೊಂಡಿರುವ ರೈಲು ನಿಲ್ದಾಣ ಜೊತೆಗೆ ರಸ್ತೆ, ಹೆದ್ದಾರಿ ಅಭಿವೃದ್ಧಿ ಸೇರಿದಂತೆ ಬರೋಬ್ಬರಿ 11 ಸಾವಿರ ಕೋಟಿ ರೂ. ಮೌಲ್ಯದ ಅಯೋಧ್ಯೆ ಅಭಿವೃದ್ಧಿ ಕಾಮಗಾರಿ, ಉತ್ತರ ಪ್ರದೇಶದ 4600 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಇಂದು ಆರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹಾಗೂ ಎರಡು ಅಮೃತ್ ಭಾರತ್ ರೈಲುಗಳಿಗೂ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ