Wednesday, August 17, 2022

Latest Posts

ಇಂದಿನಿಂದ ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಆರಂಭ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಪ್ರಧಾನಿ ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ.
ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭೇಟಿ ಮಾಡಿ, ಕ್ವಾಡ್ ರಾಷ್ಟ್ರಗಳ ಮುಖಂಡರ ಶೃಂಗಸಭೆ ಮತ್ತು ವಿಶ್ವಸಂಸ್ಥೆಯ 76ನೇ ಮಹಾ ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ.
ಕೊರೋನಾ ಸಾಂಕ್ರಾಮಿಕತೆ ಕಾಲದಲ್ಲಿ ಪ್ರಧಾನಿ ಮೋದಿಯವರ ಮೊದಲ ವಿಶೇಷ ಪ್ರಯಾಣ ಇದಾಗಲಿದೆ.
ವಾಣಿಜ್ಯ, ಬಂಡವಾಳ ಹೂಡಿಕೆ ಮತ್ತು ರಕ್ಷಣೆ ಹಾಗೂ ಭದ್ರತೆ ವಿಚಾರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆ ಬಗ್ಗೆ ಚರ್ಚೆ ನಡೆಸಲಾಗುವುದು.
ರಾಜಕೀಯ ನಾಯಕರಷ್ಟೇ ಅಲ್ಲದೆ ಅಮೆರಿಕದ ಅನೇಕ ಪ್ರಮುಖ ಕಂಪನಿಗಳ ಜೊತೆಯೂ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಸೆ.26 ರಂದು ಪ್ರಧಾನಿ ಮೋದಿ ಭಾರತಕ್ಕೆ ವಾಪಾಸಾಗಲಿದ್ದಾರೆ.
ಪ್ರಧಾನಿ ಮೋದಿಯವರು ಮೊದಲ ದಿನ ನ್ಯೂಯಾರ್ಕ್ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಲಿದ್ದಾರೆ. ಗುರುವಾರ ಜೋ ಬಿಡೆನ್ ಅವರು ಆಯೋಜಿಸಿರುವ ಕೋವಿಡ್-19 ಜಾಗತಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಸೆ.24 ರಂದು ದ್ವಿಪಕ್ಷೀಯ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!