spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನೋಯ್ಡಾದಲ್ಲಿ ಏಷ್ಯಾದ ಅತಿದೊಡ್ಡ ಏರ್​​ಪೋರ್ಟ್ ನಿರ್ಮಾಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್

ಉತ್ತರ ಪ್ರದೇಶದ ನೋಯ್ಡಾದಲ್ಲಿ ಇಂದು ಏಷ್ಯಾದ ಅತಿದೊಡ್ಡ ಏರ್​​ಪೋರ್ಟ್ ನಿರ್ಮಾಣಕ್ಕೆ ಪ್ರಧಾನಿ ಮೋದಿ ಅಡಿಗಲ್ಲು ಹಾಕಿದರು. ​
ಬಳಿಕ ಗೌತಮ ​ಬುದ್ಧನಗರದ ಜೇವರ್​​ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಏರ್​ಪೋರ್ಟ್​ಗಳ ನಿರ್ಮಾಣದಿಂದ ದೇಶದ ಆರ್ಥಿಕತೆ, ಅಭಿವೃದ್ಧಿಗೆ ಹೆಚ್ಚಿನ ಲಾಭವಾಗಲಿದೆ. ಪ್ರವಾಸೋದ್ಯಮ, ಸರಕು ಸಾಗಣೆಯ ಜೊತೆಗೆ, ಉದ್ಯೋಗ ಸೃಷ್ಟಿಸಲು ವಿಮಾನ ನಿಲ್ದಾಣಗಳು ಹೆಚ್ಚು ಸಹಕಾರಿ. ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಉತ್ತರ ಭಾರತದ ಸರಕು ಸಾಗಣೆಗೆ ದೊಡ್ಡ ಹೆದ್ದಾರಿ ಆಗಲಿದೆ ಎಂದರು.
ಈ ವಿಮಾನ ನಿಲ್ದಾಣ ಪ್ರವಾಸೋದ್ಯಮಕ್ಕೂ ಉತ್ತೇಜನ ಸಿಗಲಿದ್ದು ಕೋಟ್ಯಂತರ ಜನರಿಗೆ ಪ್ರಯೋಜನವಾಗಲಿದೆ. ಅನೇಕ ಅಂತಾರಾಷ್ಟ್ರೀಯ ಮಾರುಕಟ್ಟೆಗಳೊಂದಿಗೆ ಇಲ್ಲಿಂದ ನೇರ ಸಂಪರ್ಕ ಸಿಗುತ್ತೆ. ಈ ಪ್ರದೇಶದ ರೈತರು ಬೆಳೆಯುವ ತರಕಾರಿ, ಹಣ್ಣು ಮತ್ತು ಮೀನು ವಿದೇಶಕ್ಕೆ ರಫ್ತು ಮಾಡಲು ಅನುವಾಗಲಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss